ಮೇ ಮೊದಲ ವಾರ ಕರ್ನಾಟಕ ವಿಧಾನಸಭಾ ಚುನಾವಣೆ : ಇಂದೇ ಮುಹೂರ್ತ ಫಿಕ್ಸ್

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ (Karnataka MLA Election) ದಿನಾಂಕ ಇಂದು ಘೋಷಣೆಯಾಗುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಕೇಂದ್ರದಲ್ಲಿ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾಗಿರುವ ರಾಜೀವ್‌ ಕುಮಾರ್‌ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ (Karnataka MLA Election) ಈಗಾಗಲೇ ವಿವಿಧ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವಲ್ಲೇ ಇಂದು ಚುನಾವಣಾ ಆಯೋಗ ಸುದ್ದಿಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಇಂದೇ ಚುನಾವಣಾ ದಿನಾಂಕ ಘೋಷಣೆಯಾದ್ರೆ, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಚುನಾವಣಾ ದಿನಾಂಕ, ಮತದಾನದ ದಿನಾಂಕ, ನಾಮಪತ್ರ ಸಲ್ಲಿಕೆಯ ದಿನಾಂಕವೂ ಇಂದೇ ಫಿಕ್ಸ್‌ ಆಗಲಿದೆ. ಮೇ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ. ಕಳೆದ ಚುನಾವಣೆಯಂತೆ ಈ ಬಾರಿಯೂ ಒಂದೇ ಹಂತದಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಚುನಾವಣೆಗಾಗಿ ಈಗಾಗಲೇ ಚುನಾವಣಾ ಆಯೋಗ ಸಿದ್ದತೆಯನ್ನು ಮಾಡಿಕೊಂಡಿದೆ. ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರು ರಾಜ್ಯಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಚುನಾವಣಾ ಆಯೋಗ ಜಿಲ್ಲಾಡಳಿತಗಳಿಗೆ ಸೂಚನೆಯನ್ನು ನೀಡಿದೆ. ಇನ್ನು ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಗಡಿಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣಾ ಕಾರ್ಯವನ್ನು ಈಗಾಗಲೇ ನಡೆಸಲಾಗುತ್ತಿದೆ.

ಕಾಂಗ್ರೆಸ್, ಜೆಡಿಎಸ್‌, ಆಮ್‌ ಆದ್ಮಿ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಉಳಿದಂತೆ ಬಿಜೆಪಿ ಎಪ್ರಿಲ್‌ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ. ಒಂದೊಮ್ಮೆ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ರೆ, ಮೂರು ಪಕ್ಷಗಳು ಕೂಡ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

ಇದನ್ನೂ ಓದಿ :‌ Amit Shah : ಬಿಜೆಪಿಯಲ್ಲಿ ಟಿಕೇಟ್ ಫೈಟ್ ಗೆ ಅಮಿತ್‌ ಶಾ ಬ್ರೇಕ್, ಪಕ್ಷದ ಅಭ್ಯರ್ಥಿ ಗೆಲುವಿಗೆ ದುಡಿಯಿರಿ ಎಂದ ಚುನಾವಣಾ ಚಾಣಾಕ್ಯ

ಇದನ್ನೂ ಓದಿ : ಬಿಜೆಪಿಯಲ್ಲಿ ಬಿ.ವೈ.ವಿಜಯೇಂದ್ರಗೆ ಡಿಮ್ಯಾಂಡೋ ಡಿಮ್ಯಾಂಡ್: ಪ್ರಚಾರಕ್ಕೆ ಕಳುಹಿಸುವಂತೆ ಅಮಿತ್ ಶಾ ಬಳಿ ಶಾಸಕರ ಮನವಿ

Comments are closed.