ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿರಣ್‌ ಕೊಡ್ಗಿ ಫೈನಲ್‌

ಕುಂದಾಪುರ : (Kiran Kodgi) ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ಟಿಕೆಟ್‌ ಹಂಚಿಕೆ ಕಾವು ಹೆಚ್ಚುತ್ತಿದೆ. ಕಾಂಗ್ರೆಸ್‌ ಎರಡು ಪಟ್ಟಿಯನ್ನು ರಿಲೀಸ್‌ ಮಾಡಿದರೆ, ಜೆಡಿಎಸ್‌ ಒಂದು ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕಾದು ನೋಡುವ ತಂತ್ರ ಪ್ರಯೋಗಿಸುತ್ತಿರುವ ಬಿಜೆಪಿ ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಬಿಜೆಪಿ ಟಿಕೆಟ್ ಅಭ್ಯರ್ಥಿಗಳ ಲಿಸ್ಟ್‌ ಬರುವಿಕೆಗಾಗಿ ಅಭ್ಯರ್ಥಿಗಳು, ಪ್ರತಿಪಕ್ಷದವರು ಕೂಡ ಕುತೂಹಲದಿಂದ ಕಾಯುತ್ತಿದ್ದು, ಜನರಲ್ಲೂ ಕುತೂಹಲ ಮೂಡಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ವಾಜಪೇಯಿಯಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣೆಯಿಂದ ಹಿಂದೆ ಸರಿದ ಬಳಿಕ ಈ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಇದೀಗ ಆ ಕುತೂಹಲಕ್ಕೆ ತೆರೆ ಬೀಳುತ್ತಿದ್ದು, ಈ ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಿರಣ್‌ ಕುಮಾರ್‌ ಕೊಡ್ಗಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಆಪ್ತ ಮೂಲಗಳಿಂದ ನ್ಯೂಸ್‌ ನೆಕ್ಸ್ಟ್‌ ಗೆ ಲಭಿಸಿದೆ.

ಇದೇ ಬರುವ ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲ್ಲಿದ್ದು, ದೇಶ, ರಾಜ್ಯದಾದ್ಯಂತ ಪ್ರತಿ ಪಕ್ಷದಲ್ಲೂ ಚುನಾವಣೆ ಬಿಸಿ ಏರಿದೆ. ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದು, ಈಗಾಗಲೇ ಹೆಚ್ಚಿನ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಾಕಿ ಇದ್ದು, ಸೋಮವಾರ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅದರಲ್ಲೂ ಕುಂದಾಪುರ ಕ್ಷೇತ್ರದಲ್ಲಂತೂ ಈ ಬಾರಿ ಕುತೂಹಲ ಜಾಸ್ತಿಯಾಗಿದೆ.

ಏಕೆಂದರೆ ಕುಂದಾಪುರ ಕ್ಷೇತ್ರದ ವಾಜಪೇಯಿ ಅಂತಲೇ ಕರೆಸಿಕೊಳ್ಳುತ್ತಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಪ್ರತಿ ಬಾರಿ ಕುಂದಾಪುರದಲ್ಲಿ ಹಾಲಾಡಿಯವರೇ ನಿಂತು ಜಯಭೇರಿ ಬಾರಿಸಿದ್ದರು. ಸತತ ಐದು ಬಾರಿ ಕುಂದಾಪುರದಲ್ಲಿ ಶಾಸಕರಾಗಿ ಆಯ್ಕೆಯಾದ ಇವರು ಈ ಬಾರಿ ಚುನಾವಣೆಯಿಂದ ಹಿಂದೆ ಸರಿದಿದ್ದು, ಕಿರಣ್‌ ಕೊಡ್ಗಿ ಯವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಬೆಂಬಲ ನೀಡುವುದಲ್ಲದೇ ಈ ಬಾರಿ ಅವರಿಗೆ ಅವಕಾಶ ನೀಡುವ ಸಲುವಾಗಿಯೇ ಚುನಾವಣೆಯಿಂದ ಹಿಂದೆ ಸರಿಯುತ್ತಿರುವುದಾಗಿಯೂ ತಿಳಿಸಿದ್ದರು. ಈ ನಿಟ್ಟಿನಲ್ಲಿ ಈ ಬಾರಿ ಕಿರಣ್‌ ಕೊಡ್ಗಿಯವರೇ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಮಧ್ಯೆ ಜಯಪ್ರಕಾಶ್‌ ಹೆಗ್ಡೆಯವರ ಹೆಸರು ಕೂಡ ಕೇಳಿಬಂದಿದ್ದು, ಹೆಗ್ಡೆಯವರಿಗೆ ಟಿಕೆಟ್‌ ಫೈನಲ್‌ ಆಗಲಿದೆ ಎಂದು ಹೇಳಲಾಗುತ್ತಿತ್ತು.

ಇದನ್ನೂ ಓದಿ : ಮತ ಕೇಳಲು ಬರುವವರ ಈ ಮಾತು ಕತೆಯಾಗಿಯೇ ಉಳಿಯುವುದು…

ಹೀಗಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕುಂದಾಪುರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇದೀಗ ಕಿರಣ್‌ ಕೊಡ್ಗಿಯವರು ಸ್ಪರ್ಧಿಸಲಿದ್ದಾರೆ ಎಂಬ ಖಚಿತ ಮಾಹಿತಿಗಳು ಆಪ್ತ ಮೂಲಗಳಿಂದ ಲಭಿಸಿವೆ. ಇನ್ನೂ ಅಧೀಕೃತವಾಗಿ ಘೋಷಣೆಯಾಗುವುದೊಂದೇ ಬಾಕಿ ಇದ್ದು, ಈ ಬಾರಿ ಕುಂದಾಪುರ ಕ್ಷೇತ್ರದಲ್ಲಿ ಕಿರಣ್‌ ಕೊಡ್ಗಿ ಸ್ಪರ್ಧಿಸಲಿದ್ದಾರೆ. ಇನ್ನೂ ಬೈಂದೂರು ಕ್ಷೇತ್ರದಲ್ಲಿ ಸುಕುಮಾರ್‌ ಶೆಟ್ಟಿ ಅವರು ಟಿಕೆಟ್‌ ಗಾಗಿ ಹೆಣಗಾಡುತ್ತಿದ್ದು, ಇನ್ನೊಬ್ಬ ಟಿಕೆಟ್‌ ಆಕಾಂಕ್ಷಿಯಾಗಿರುವ ಗುರುರಾಜ್‌ ಗಂಟಿಹೊಳೆ ಅವರಿಗೆ ಟಿಕೆಟ್‌ ಫೈನಲ್‌ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Kiran Kodgi: Kiran Kodgi is the final as a BJP candidate from Kundapur assembly constituency

Comments are closed.