ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ : ಮೂಡಿಗೆರೆ ಶಾಸಕ ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ

ಬೆಂಗಳೂರು : (Kumaraswamy resigns BJP) ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 23 ಮಂದಿ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್‌ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್‌ ಹಂಚಿಕೆಯಲ್ಲಿ ಈ ಬಾರಿ ಅನೇಕ ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದೆ. ಅದರಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಟಿಕೆಟ್‌ ಹಾಲಿ ಶಾಸಕ ಹಾಗೂ ಮೂರು ಬಾರಿ ಗೆದ್ದ ಎಂ.ಪಿ.ಕುಮಾರಸ್ವಾಮಿಗೆ ಕೈ ತಪ್ಪಿದೆ. ಇದೀಗ ವಿಧಾನಸಭೆ ಚುನಾವಣೆ ಟಿಕೆಟ್‌ ಕೈ ತಪ್ಪಿದ ಹಿನ್ನಲೇ ಬಿಜೆಪಿಯ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಎಂಪಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೂಡಿಗೆರೆಯಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದ್ರೆ, ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಬಿಜೆಪಿ ಹೈಕಮಾಂಡ್​, ದೀಪಕ್ ದೊಡ್ಡಯ್ಯ ಎನ್ನುವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಇದರಿಂದ ಅಸಮಧಾನಗೊಂಡ ಎಂಪಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ” ಆತ್ಮೀಯ ಕ್ಷೇತ್ರದ ಮತದಾರ ಬಂಧುಗಳೇ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು ಹೈಕಮಾಂಡ್ ಗೇ ತಪ್ಪಾಗಿ ಕಂಡಿದ್ದು ಪರಮಾಶ್ಚರ್ಯ ಸರ್ವೇ ಆಧರಿಸಿ ಟಿಕೇಟ್ ನೀಡುವ ಪಕ್ಷ ಪ್ರತಿ ಸರ್ವೆಯಲ್ಲಿ ಮುನ್ನಡೆಯಿದ್ದರು, ಟಿಕೆಟ್ ನಿರಾಕರಿಸಿದ್ದು ನೋವಿನ ವಿಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.”

ಇದನ್ನೂ ಓದಿ : Karnataka Assembly Election : ಬಿಜೆಪಿ 2ನೇ ಪಟ್ಟಿ ಪ್ರಕಟ – ಬೈಂದೂರಿಗೆ ಗುರುರಾಜ್‌ ಗಂಟಿಹೊಳೆ, ಮಾಡಾಳು ಪುತ್ರನಿಗೆ ನಿರಾಸೆ

” ಮಳೆಯಿಂದಾಗಿ ಬೆಳೆ ಕಳೆದುಕೊಂಡ ಕ್ಷೇತ್ರದ ರೈತಭಾಂದವರಿಗೋಸ್ಕರ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಏಕಾಂಗಿಯಾಗಿ ಧರಣಿ ಕುಳಿತಿದ್ದು ಹೈಕಾಮಾಂಡ್​​ಗೆ ತಪ್ಪು ಅನ್ನಿಸಿದ್ದು ಇನ್ನೂ ಪರಮಾಶ್ಚರ್ಯ. ನಿಮಗೆಲ್ಲಾ ತಳಿದಿರುವಂತೆ ಶತ್ರುಗಳಿಗೂ ಕೂಡ ಕೇಡು ಬಯಸದೇ ಎಲ್ಲರನ್ನ ಸದಾ ಗೌರವಿಸುತ್ತಾ ಪ್ರೀತಿಯಿಂದ ಕಾಣುತ್ತಲೇ ಬಂದೆ. ಪಕ್ಷದ ಕಾರ್ಯಕರ್ತರನ್ನ ಬೆಳೆಸಿದ್ದೇನೆ ಹೊರತು ನನ್ನ ಮನೆಯವರನ್ನಲ್ಲ” ಎಂದಿದ್ದಾರೆ.

Kumaraswamy resigns BJP : Rebellion after release of BJP second list : Mudigere MLA Kumaraswamy resigns from BJP

Comments are closed.