ಕುಂದಾಪುರದಲ್ಲಿ ಕಿರಣ್‌ ಕೊಡ್ಗಿ ಭರ್ಜರಿ ಗೆಲುವು

ಕುಂದಾಪುರ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ (Kundapur Assembly Constituency) ಶಾಸಕರಾಗಿ ಕಿರಣ್‌ ಕೊಡ್ಗಿ ಅವರು ಆಯ್ಕೆಯಾಗಿದ್ದಾರೆ. ಆರಂಭದಿಂದಲೂ ಕಿರಣ್‌ ಕೊಡ್ಗಿ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಅಂತಿಮವಾಗಿ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಿರಣ್‌ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಕಿರಣ್‌ ಕೊಡ್ಗಿ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಕ್ಷೇತ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ಏರ್ಪಡುವ ಲೆಕ್ಕಾಚಾರ ಹಾಕಲಾಗಿತ್ತು. ಆದ್ರೂ ಕೂಡ ಬಿಜೆಪಿ ಆರಂಭದಿಂದಲೂ ಕಿರಣ್‌ ಕೊಡ್ಗಿ ಅವರು ಬಾರೀ ಮುನ್ನಡೆಯನ್ನು ಕಾಯ್ದುಕೊಂಡಿದ್ದರು.

ಇನ್ನು ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದಲ್ಲಿ ಉಡುಪಿ, ಕಾಪು, ಕುಂದಾಪುರ, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದಕೊಂಡಿದ್ದು, ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದ್ರೆ ಇದೀಗ ಬಂದ ಮಾಹಿತಿಯ ಪ್ರಕಾರ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಅವರು ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಸೋಲು ಕಂಡಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶಪಾಲ್‌ ಸುವರ್ಣ ಮುನ್ನಡೆಯನ್ನು ಕಾಯ್ದುಕೊಂಡಿದ್ರೆ, ಕಾಂಗ್ರೆಸ್‌ನ ಪ್ರಸಾದ್‌ ರಾಜ್‌ ಕಾಂಚನ್‌ ಬಾರೀ ಹಿನ್ನಡೆ ಅನುಭವಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥ ಉದಯ ಕುಮಾರ್‌ ಶೆಟ್ಟಿ ವಿರುದ್ದ ಕಾರ್ಕಳ ಸುನಿಲ್‌ ಕುಮಾರ್‌ ಮುನ್ನಡೆ ಕಾಯ್ದುಕೊಂಡಿದ್ರೆ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ವಿರುದ್ದ ಗುರ್ಮೆ ಸುರೇಶ್‌ ಶೆಟ್ಟಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ : ಡಿಕೆ ಶಿವಕುಮಾರ್‌, ಸ್ವರೂಪ್‌ ಗೆ ಗೆಲುವು : ಮುನ್ನಡೆ ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ

ಇನ್ನು ಆರಂಭದಿಂದಲೂ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಗೋಪಾಲ ಪೂಜಾರಿ ಅವರು, ಇದೀಗ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಅವರ ವಿರುದ್ದ ಸುಮಾರು 900 ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದಲ್ಲಿ ಉಡುಪಿ, ಕಾಪು, ಕುಂದಾಪುರ, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದಕೊಂಡಿದ್ದು, ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದ್ರೆ ಇದೀಗ ಬಂದ ಮಾಹಿತಿಯ ಪ್ರಕಾರ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶಪಾಲ್‌ ಸುವರ್ಣ ಮುನ್ನಡೆಯನ್ನು ಕಾಯ್ದುಕೊಂಡಿದ್ರೆ, ಕಾಂಗ್ರೆಸ್‌ನ ಪ್ರಸಾದ್‌ ರಾಜ್‌ ಕಾಂಚನ್‌ ಬಾರೀ ಹಿನ್ನಡೆ ಅನುಭವಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥ ಉದಯ ಕುಮಾರ್‌ ಶೆಟ್ಟಿ ವಿರುದ್ದ ಕಾರ್ಕಳ ಸುನಿಲ್‌ ಕುಮಾರ್‌ ಮುನ್ನಡೆ ಕಾಯ್ದುಕೊಂಡಿದ್ರೆ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ವಿರುದ್ದ ಗುರ್ಮೆ ಸುರೇಶ್‌ ಶೆಟ್ಟಿ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಆರಂಭದಿಂದಲೂ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಗೋಪಾಲ ಪೂಜಾರಿ ಅವರು, ಇದೀಗ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಅವರ ವಿರುದ್ದ ಸುಮಾರು 900 ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Kundapur Assembly Constituency: Kiran Kodgi won by a landslide in Kundapur

Comments are closed.