ಶಿವಮೊಗ್ಗ ಬಿಜೆಪಿಯಲ್ಲಿ ಮೇಯರ್‌, ಉಪಮೇಯರ್‌ ಸೇರಿದಂತೆ 19 ಮಂದಿ ರಾಜೀನಾಮೆ

ಶಿವಮೊಗ್ಗ : (Mass resignation announcement) ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಬಿಜೆಪಿ ಕೊನೆಗೂ ಟಿಕೆಟೆ ಘೋಷಣೆ ಮಾಡಿದೆ. ಟಿಕೆಟ್‌ ಘೋಷಣೆ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನಗಳು ಬುಗಿಲೆದ್ದಿದೆ. ಬಿಜೆಪಿ ಪಕ್ಷದ ಶಾಸಕರೇ ಬಂಡಾಯವೆದ್ದಿದ್ದು, ಹಲವರು ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗದಲ್ಲಿ ಕೆ.ಎಸ್‌. ಈಶ್ವರಪ್ಪ ಚುನಾವಣೆಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಕಾರ್ಯಕರ್ತರು ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ನಡುವೆಯೇ ಶಿವಮೊಗ್ಗದ ಮೇಯರ್‌, ಉಪಮೇಯರ್‌ ಗಳು ಸೇರಿದಂತೆ 19 ಮಂದಿ ಸಾಮೂಹಿಕ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಟಿಕೆಟ್‌ ಘೊಷಣೆ ಬೆನ್ನಲ್ಲೇ ಟಿಕೆಟ್‌ ಕೈ ತಪ್ಪಿದ ಕಾರಣ ಹಲವರು ಬಂಡಾಯವೆದ್ದಿದ್ದಾರೆ. ಇದರ ನಡುವೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಜಿಲ್ಲಾ ಕಛೇರಿ ಎದುರುಗಡೆ ಕಾರ್ಯಕರ್ತರು ಅಭಿಮಾನಿಗಳು ಧರಣಿ ನಡೆಸಿದ್ದಾರೆ. ದೀನ ದಯಾಳ್‌ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರ ಜೊತೆಗೆ ಈಶ್ವರಪ್ಪನವರ ಪುತ್ರ ಕಾಂತೇಶ್‌ ಗೆ ಟಿಕೆಟ್‌ ನೀಡುವಂತೆ ಆಗ್ರಹಿಸಿದ್ದಾರೆ.

ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕಾರ್ಯಕರ್ತರು, ಬೆಂಬಲಿಗರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರು ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಸಾಮೂಹಿಕ‌ ರಾಜೀನಾಮೆ ಸಲ್ಲಿಸಿದ್ದಾರೆ. ಮೇಯರ್, ಉಪಮೇಯರ್ ಸೇರಿ 19 ಸದಸ್ಯರು ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದರ ಜೊತೆಗೆ ಬೆಂಗಳೂರಿನಲ್ಲಿ ಯಡಿಯೂರಪ್ಪನವರನ್ನು ಭೇಟಿಯಾಗಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : Lakshman Savadi : ಚುನಾವಣೆಗೆ ನಿವೃತ್ತಿ ಘೋಷಿಸಿದ ಲಕ್ಷ್ಮಣ್‌ ಸವದಿ : ಮನವೊಲಿಕೆಗೆ ಮುಂದಾದ ಹೈಕಮಾಂಡ್‌

ಇದನ್ನೂ ಓದಿ : ತಾಪಮಾನದಲ್ಲಿ ಹೆಚ್ಚಳ : ಬತ್ತಿದ ಹೊಳೆಕೆರೆಗಳು, ಎಲ್ಲೆಡೆ ನೀರಿಗಾಗಿ ಹಾಹಾಕಾರ

ಮೇಲಿಂದ ಮೇಲೆ ಬಿಜೆಪಿ ಪಕ್ಷದ ಬಹುಮುಖ್ಯ ನಾಯಕರುಗಳು ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದು, ಬಿಜೆಪಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಮ್ಮ ವಯಸ್ಸಿನ ಕಾರಣಗಳನ್ನು ಹೇಳಿ ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ಇದಾದ ಬಳಿಕ ಕಳೆದ ಸೋಮವಾರ ಕುಂದಾಪುರದ ವಾಜಪೇಯಿ ಅಂತ ಕರೆಸಿಕೊಳ್ಳುತ್ತಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಇದು ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿಗೆ ಒಂದು ದೊಡ್ಡ ಹೊಡೆತವಾಗಿತ್ತು. ಇದಾದ ಬಳಿಕ ಶಿವಮೊಗ್ಗದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಎಸ್‌ ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಹೀಗೆ ಉಡುಪಿ ಶಾಸಕ ರಘುಪತಿ ಭಟ್‌, ಅಂಗಾರ, ಸೋಮಣ್ಣ, ಹೀಗೆ ಅನೇಕರು ಟಿಕೆಟ್‌ ವಂಚಿತರಾಗಿದ್ದು, ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ : ಕೊನೆಗೂ ನಿಜವಾಯ್ತು ಜೋಶಿ ಭವಿಷ್ಯ: ಶೆಟ್ಟರ್ ಕೈ ತಪ್ಪಿದ ಟಿಕೇಟ್

Mass resignation announcement: 19 people including mayor and deputy mayor resigned in Shimoga BJP

Comments are closed.