Rahul gandhi mega rally : ಬಾಲ್ಕಿ – ಹುಮ್ನಾಬಾದ್ ನಲ್ಲಿ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಮೆಗಾ ರ‍್ಯಾಲಿ

ಬೀದರ್:‌ (Rahul gandhi mega rally) ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನಿನ್ನೆ ಕೋಲಾರದಲ್ಲಿ ಜೈ ಭಾರತ್‌ ಸಮಾವೇಶದಲ್ಲಿ ಭಾಗಿಯಾದ ರಾಹುಲ್‌ ಗಾಂಧಿ ಇಂದು ಬೀದರ್ ನ ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ಪಕ್ಷದ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ಪ್ರಚಾರ ಕಾರ್ಯ ಭರ್ಜರಿಯಾಗೇ ನಡೆಯುತ್ತಿದೆ. ಈ ಮಧ್ಯೆ ಕೇಂದ್ರ ಕಾಂಗ್ರೆಸ್‌ನ ಯುವರಾಜ ಕರ್ನಾಟಕಕ್ಕೆ ಆಗಮಿಸಿದ್ದು, ಕಾಂಗ್ರೆಸ್‌ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ ಕೋಲಾರಕ್ಕೆ ಆಗಮಿಸಿದ್ದ ರಾಹುಲ್‌ ಗಾಂಧಿ, ಜೈ ಭಾರತ್‌ ಸಮಾವೇಶದಲ್ಲಿ ಭಾಗಿಯಾಗಿ ಪಕ್ಷದ ಕುರಿತಾಗಿ, ಚುನಾವಣೆ ಕುರಿತಾಗಿ ಮಾತನಾಡಿದ್ದರು. ಇದೀಗ ಇಂದು ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ರಾಹುಲ್‌ ಗಾಂಧಿ ಮೆಗಾ ರ್ಯಾಲಿ ನಡೆಯಲಿದ್ದು, ನಂತರ ರ್ಯಾಲಿಯನ್ನು ಉದ್ದೇಶಿಸಿ ಕಾಂಗ್ರೆಸ್‌ ನಾಯಕ ಮಾತನಾಡಲಿದ್ದಾರೆ.

ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮಾಜಿ ಸಚಿವ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಮಾಜಿ ಸಚಿವ ರಾಜಶೇಖರ್ ಬಿ ಪಾಟೀಲ್ ಅವರು ಹಾಲಿ ಶಾಸಕರು ಮತ್ತು ಕ್ರಮವಾಗಿ ಭಾಲ್ಕಿ ಮತ್ತು ಹುಮನಾಬಾದ್ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಅಭ್ಯರ್ಥಿಗಳಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ : ಕರ್ನಾಟಕಕ್ಕೆ‌ ರಾಹುಲ್ ಗಾಂಧಿ ಭೇಟಿ : ಜೈ ಭಾರತ್ ಸಮಾವೇಷದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಯುವರಾಜ

ಇನ್ನೂ ರಾಜ್ಯದ 224 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ ಬಿಜೆಪಿ 119 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ 75 ಮತ್ತು ಜೆಡಿಎಸ್ 28 ಸ್ಥಾನಗಳನ್ನು ಹೊಂದಿದೆ. ಕೇಸರಿ ಪಕ್ಷವು ಅಧಿಕಾರದಲ್ಲಿರುವ ದಕ್ಷಿಣದ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದು, ಕೇಂದ್ರ ನಾಯಕರುಗಳನ್ನು ಕರೆಸಿ ಪ್ರಚಾರ ನಡೆಸುತ್ತಿದೆ.

Rahul gandhi mega rally : Congress leader Rahul Gandhi mega rally in Balki – Humnabad

Comments are closed.