ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಉಡುಪಿ : ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದಲ್ಲಿ (Udupi Assembly Constituency) ಉಡುಪಿ, ಕಾಪು, ಕುಂದಾಪುರ, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದಕೊಂಡಿದ್ದು, ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದ್ರೆ ಇದೀಗ ಬಂದ ಮಾಹಿತಿಯ ಪ್ರಕಾರ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶಪಾಲ್‌ ಸುವರ್ಣ ಮುನ್ನಡೆಯನ್ನು ಕಾಯ್ದುಕೊಂಡಿದ್ರೆ, ಕಾಂಗ್ರೆಸ್‌ನ ಪ್ರಸಾದ್‌ ರಾಜ್‌ ಕಾಂಚನ್‌ ಬಾರೀ ಹಿನ್ನಡೆ ಅನುಭವಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥ ಉದಯ ಕುಮಾರ್‌ ಶೆಟ್ಟಿ ವಿರುದ್ದ ಕಾರ್ಕಳ ಸುನಿಲ್‌ ಕುಮಾರ್‌ ಮುನ್ನಡೆ ಕಾಯ್ದುಕೊಂಡಿದ್ರೆ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ವಿರುದ್ದ ಗುರ್ಮೆ ಸುರೇಶ್‌ ಶೆಟ್ಟಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ : ಡಿಕೆ ಶಿವಕುಮಾರ್‌, ಸ್ವರೂಪ್‌ ಗೆ ಗೆಲುವು : ಮುನ್ನಡೆ ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನೂ ಓದಿ : Karnataka Election Result 2023 : ಕಾಂಗ್ರೆಸ್‌ 103, ಬಿಜೆಪಿ 80, ಜೆಡಿಎಸ್‌ 34 ಮುನ್ನಡೆ

ಇನ್ನು ಆರಂಭದಿಂದಲೂ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಗೋಪಾಲ ಪೂಜಾರಿ ಅವರು, ಇದೀಗ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಅವರ ವಿರುದ್ದ ಸುಮಾರು 900 ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಬಿಜೆಪಿ, 3 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ

ಮಂಗಳೂರು : ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಕಾರ್ಯ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada congress) ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದಕ್ಷಿಣ ವೇದವ್ಯಾಸ್‌ ಕಾಮತ್, ಬೆಳ್ತಂಗಡಿ‌ ಹರೀಶ್‌ ಪೂಂಜಾ, ಮೂಡಬಿದಿರೆಯಲ್ಲಿ ಉಮಾನಾಥ ಕೋಟ್ಯಾನ್, ಸುಳ್ಯ‌ ಭಾಗೀರತಿ, ಬಂಟ್ವಾಳ ಕ್ಷೇತ್ರದಲ್ಲಿ ರಾಜೇಶ್‌ ನಾಯಕ್‌ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಉಳಿದಂತೆ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ.ಖಾದರ್‌, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನಾಯತ್‌ ಆಲಿ ಹಾಗೂ ಪುತ್ತೂರು ಕ್ಷೇತ್ರದಲ್ಲಿ ಅಶೋಕ್‌ ಕುಮಾರ್‌ ರೈ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಉಳ್ಳಾಲ ಕ್ಷೇತ್ರವನ್ನು ಹೊರತು ಪಡಿಸಿ ಉಳಿದ ಏಳು ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳಿದ್ದರು. ಈ ಪೈಕಿ ಪುತ್ತೂರಿನ ಸಂಜೀವ ಮಠಂದೂರು ಹಾಗೂ ಸುಳ್ಯದ ಶಾಸಕ ಅಂಗಾರ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿ ಹೊಸ ಅಭ್ಯರ್ಥಿಗಳಿಗೆ ಮಣೆ ಹಾಕಲಾಗಿತ್ತು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್‌ ನೀಡಿದ ಹಿನ್ನೆಲೆಯಲ್ಲಿ ಅರುಣ್‌ ಪುತ್ತಿಲ ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು. ಇದರಿಂದಾಗಿ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ.

Udupi Assembly Constituency: BJP leads in five constituencies of Udupi

Comments are closed.