ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳಷ್ಟೇ ಬಾಕಿ ಉಳಿದಿದೆ. ಮೇ.10 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಬಳಸಿಕೊಂಡು ಮತ ಚಲಾಯಿಸಲು (Voter ID – Other Document) ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕು. ಒಂದು ವೇಳೆ ಅದನ್ನು ಬಳಸಿಕೊಳ್ಳಲು ಸಾಧ್ಯವಾಗದ್ದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಬಳಸಿಕೊಂಡು ಮತದಾರರು ತಮ್ಮ ಹಕ್ಕನ್ನು ಚಲಾಯಿಸಬಹುದಾಗಿದೆ.
Voter ID – Other Document : ಮತದಾನ ಮಾಡಲು ಬೇಕಾಗುವ ಪರ್ಯಾಯ ದಾಖಲೆಗಳ ವಿವರ :
- ಆಧಾರ್ ಕಾರ್ಡ್
- ಎಂಎನ್‌ಆರ್‌ಇಜಿಎ ಜಾಬ್ ಕಾರ್ಡ್ ಬ್ಯಾಂಕ್
- ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್ ಬುಕ್‌ಗಳು
- ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
- ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್
- ಎನ್ಪಿಆರ್ ಅಡಿಯಲ್ಲಿ ಆರ್ಜಿಐ ನೀಡಿದ ಸ್ಮಾರ್ಟ್ ಕಾರ್ಡ್
- ಭಾರತೀಯ ಪಾಸ್ಫೋರ್ಟ್
- ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
- ರಾಜ್ಯ, ಕೇಂದ್ರ ಸರಕಾರದ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ
- ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು
- ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು
ಇದನ್ನೂ ಓದಿ : Ramya Campaign : ಪ್ರಿಯಾಂಕಾ ಗಾಂಧಿ ಜೊತೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕ್ಯಾಂಪೇನ್ : ಮಂಡ್ಯ ರಣಕಣದಲ್ಲಿ ಸ್ಟಾರ್ ಹವಾ
ಇದನ್ನೂ ಓದಿ : ಬಿಪಿಎಲ್ ಕಾರ್ಡುದಾರರಿಗೆ ಅರ್ಧ ಲೀಟರ್ ಹಾಲು, ವರ್ಷಕ್ಕೆ 3 ಗ್ಯಾಸ್ ಸಿಲಿಂಡರ್ ಉಚಿತ: ಬಿಜೆಪಿ ಪ್ರನಾಳಿಕೆಯಲ್ಲಿ ಏನೇನಿದೆ ?
ಹೀಗಾಗಿ ಮತದಾರರು ತಮ್ಮ ಗುರುತಿನ ಚೀಟಿಯನ್ನು ಕಳೆದುಕೊಂಡರು ಚಿಂತಿಸುವ ಅಗತ್ಯವಿರುವುದಿಲ್ಲ. ಈ ಮೇಲೆ ತಿಳಿಸಿದ ಪರ್ಯಾಯ ದಾಖಲೆಗಳನ್ನು ಬಳಸಿಕೊಂಡು ನಿಮ್ಮ ಮೆಚ್ಚಿನ ಅಭ್ಯರ್ಥಿಗಳಿಗೆ ಮತ ಹಾಕಬಹುದಾಗಿದೆ.
ಇದನ್ನೂ ಓದಿ : ಕರ್ನಾಟಕದ ಮುಂದಿನ ಸಿಎಂ ಹೆಸರು ಘೋಷಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
Voter ID – Other Document : For Voter’s Attention : Don’t worry if you don’t have Voter ID, you can vote if you have these documents.