FFM 2026: ಮೆಲ್ಬೋರ್ನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ 'ಕಾಂತಾರ' ದರ್ಬಾರ್.. ರಿಷಬ್ ಶೆಟ್ಟಿಗೆ ಎರಡೆರಡು ಪ್ರಶಸ್ತಿ
ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಪ್ರತಿಷ್ಠಿತ 17ನೇ ಆವೃತ್ತಿಯ 'ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್' ಪ್ರಶಸ್ತಿ ವಿಜೇತರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.
By Meghana Pranuth | ಮೇಘನಾ ಪ್ರಣೂತ್
1 min read
ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಪ್ರತಿಷ್ಠಿತ 17ನೇ ಆವೃತ್ತಿಯ 'ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್' (IFFM 2026) ಪ್ರಶಸ್ತಿ ವಿಜೇತರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಭಾರತೀಯ ಚಿತ್ರರಂಗದ ವೈವಿಧ್ಯಮಯ ಕಥೆಗಳು, ನಟನೆ ಮತ್ತು ತಾಂತ್ರಿಕ ಶ್ರೇಷ್ಠತೆಯನ್ನು ಗೌರವಿಸುವ ಈ ಸಮಾರಂಭದಲ್ಲಿ, ಕನ್ನಡದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ ಭಾರತದ ಹಲವು ದಿಗ್ಗಜ ಕಲಾವಿದರು ಪ್ರಮುಖ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ರಿಷಬ್ ಶೆಟ್ಟಿಗೆ 'ಡಬಲ್' ಗೌರವ!
ಕನ್ನಡ ಚಿತ್ರರಂಗದ ಸಾಂಸ್ಕೃತಿಕ ವೈಭವವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ರಿಷಬ್ ಶೆಟ್ಟಿ ಅವರಿಗೆ ಈ ಬಾರಿಯ ಚಲನಚಿತ್ರೋತ್ಸವದಲ್ಲಿ ವಿಶೇಷ ಗೌರವ ಲಭಿಸಿದೆ:
ಅತ್ಯುತ್ತಮ ನಿರ್ದೇಶಕ: 'ಕಾಂತಾರ: ಚಾಪ್ಟರ್ 1' ಸಿನಿಮಾಗಾಗಿ ರಿಷಬ್ ಶೆಟ್ಟಿ 'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಲೀಡರ್‌ಶಿಪ್ ಇನ್ ಸಿನಿಮಾ: ಭಾರತೀಯ ಸಿನಿಮಾಗೆ ನೀಡಿರುವ ವಿಶಿಷ್ಟ ಕೊಡುಗೆ ಹಾಗೂ ಸಾಂಸ್ಕೃತಿಕ ಕಥೆಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಪ್ರತಿಷ್ಠಿತ 'ಲೀಡರ್‌ಶಿಪ್ ಇನ್ ಸಿನಿಮಾ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Topics
ಸಂಬಂಧಿತ ಸುದ್ದಿಗಳು
entertainment
ನಟಿ ರನ್ಯಾ ರಾವ್ ಸ್ಮಗ್ಲಿಂಗ್ ಕೇಸ್ಗೆ ಬಿಗ್ ಟ್ವಿಸ್ಟ್: "ನನಗೆ ಭಾರತದ ಕಾನೂನು ಅನ್ವಯಿಸಲ್ಲ" ಎಂದ ಆಪ್ತ!
entertainment
ಯಶ್-ರಾಧಿಕಾಗೆ ಮದುವೆ ಕರೆಯೋಲೆ ಕೊಟ್ಟ ನಟ ಚಿಕ್ಕಣ್ಣ
entertainment
"ಕನಸಿನಲ್ಲಿ ಬಂದು ತಬ್ಬಿಕೊಂಡಿದ್ದ" ಸುಶಾಂತ್ ಸಿಂಗ್: ಭಾವುಕರಾದ ಸಹೋದರಿ ಶ್ವೇತಾ, ಧೋನಿ ವಿರುದ್ಧ ಬೇಸರ!
entertainment

