News Next Kannada

entertainment

FFM 2026: ಮೆಲ್ಬೋರ್ನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ 'ಕಾಂತಾರ' ದರ್ಬಾರ್.. ರಿಷಬ್ ಶೆಟ್ಟಿಗೆ ಎರಡೆರಡು ಪ್ರಶಸ್ತಿ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಪ್ರತಿಷ್ಠಿತ 17ನೇ ಆವೃತ್ತಿಯ 'ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್' ಪ್ರಶಸ್ತಿ ವಿಜೇತರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

By Meghana Pranuth | ಮೇಘನಾ ಪ್ರಣೂತ್‌
FFM 2026

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಪ್ರತಿಷ್ಠಿತ 17ನೇ ಆವೃತ್ತಿಯ 'ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್' (IFFM 2026) ಪ್ರಶಸ್ತಿ ವಿಜೇತರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಭಾರತೀಯ ಚಿತ್ರರಂಗದ ವೈವಿಧ್ಯಮಯ ಕಥೆಗಳು, ನಟನೆ ಮತ್ತು ತಾಂತ್ರಿಕ ಶ್ರೇಷ್ಠತೆಯನ್ನು ಗೌರವಿಸುವ ಈ ಸಮಾರಂಭದಲ್ಲಿ, ಕನ್ನಡದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ ಭಾರತದ ಹಲವು ದಿಗ್ಗಜ ಕಲಾವಿದರು ಪ್ರಮುಖ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ರಿಷಬ್ ಶೆಟ್ಟಿಗೆ 'ಡಬಲ್' ಗೌರವ!

ಕನ್ನಡ ಚಿತ್ರರಂಗದ ಸಾಂಸ್ಕೃತಿಕ ವೈಭವವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ರಿಷಬ್ ಶೆಟ್ಟಿ ಅವರಿಗೆ ಈ ಬಾರಿಯ ಚಲನಚಿತ್ರೋತ್ಸವದಲ್ಲಿ ವಿಶೇಷ ಗೌರವ ಲಭಿಸಿದೆ:

  • ಅತ್ಯುತ್ತಮ ನಿರ್ದೇಶಕ: 'ಕಾಂತಾರ: ಚಾಪ್ಟರ್ 1' ಸಿನಿಮಾಗಾಗಿ ರಿಷಬ್ ಶೆಟ್ಟಿ 'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

  • ಲೀಡರ್‌ಶಿಪ್ ಇನ್ ಸಿನಿಮಾ: ಭಾರತೀಯ ಸಿನಿಮಾಗೆ ನೀಡಿರುವ ವಿಶಿಷ್ಟ ಕೊಡುಗೆ ಹಾಗೂ ಸಾಂಸ್ಕೃತಿಕ ಕಥೆಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಪ್ರತಿಷ್ಠಿತ 'ಲೀಡರ್‌ಶಿಪ್ ಇನ್ ಸಿನಿಮಾ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.