Bellary Vims Hospital: ವೆಂಟಿಲೇಟರ್‌ ಸ್ಥಗಿತ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯಲ್ಲಿ 3 ರೋಗಿಗಳ ಸಾವು

ಬಳ್ಳಾರಿ : (Bellary Vims Hospital)ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ವೆಂಟಿಲೇಟರ್‌ ಸ್ಥಗಿತಗೊಂಡು, ಮೂವರು ರೋಗಿಗಳು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ವಿರುದ್ದ ಇದೀಗ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಆಡಳಿತ ಮಂಡಳಿ ಮಾತ್ರ ಜಾರಿಕೊಳ್ಳುವ ಯತ್ನ ಮಾಡುತ್ತಿದೆ ಅನ್ನೋ ಆರೋಪ ಕೇಳಿಬಂದಿದೆ.

ಮೌಲಾ ಹುಸೇನ್‌, ಚೆಟ್ಟಮ್ಮ ಹಾಗೂ ಮತ್ತೋರ್ವ ರೋಗಿ ಸೇರಿದಂತೆ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. (Bellary Vims Hospital)ಆಸ್ಪತ್ರೆಯಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗಿದ್ದು, ವೆಂಟಿಲೇಟರ್‌ ಸ್ಥಗಿತಗೊಂಡಿತ್ತು. ಇದರಿಂದಾಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹತ್ತು ರೋಗಿಗಳ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಆದರೆ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ವಿದ್ಯುತ್‌ ಸಮಸ್ಯೆಯಿಂದ ಉಂಟಾದ ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಲು ಆಡಳಿತ ಮಂಡಳಿ ನಿರಾಕರಿಸಿದೆ. ಆದರೆ ಈ ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಡಾ.ಗಂಗಾಧರ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದು, ಮೂವರ ಸಾವಿಗೆ ಬೇರೆಯದೇ ಕಾರಣವನ್ನು ನೀಡಿದ್ದಾರೆ.

ವಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿರುವ ಸಾವುಗಳು ತೀವ್ರ ತರಹದ ಆರೋಗ್ಯ ಸಮಸ್ಯೆಗಳಿಂದ ಸಂಭವಿಸಿದೆ. ಒಬ್ಬ ರೋಗಿಗೆ ವಿಷಪೂರಿತ ಹಾವು ಕಡಿದಿದ್ದರಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಅವರ ದೇಹದ ಅಂಗಾಂಗ ವೈಫಲ್ಯದಿಂದ ನಮ್ಮ ಆಸ್ಪತ್ರೆಗೆ ದಾಖಲಾಗಿದ್ದು, ಆಮೇಲೆ ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದಾರೆ. ಮೂರನೇ ರೋಗಿಯು ಹಲವು ದಿನಗಳಿಂದ ಮೂತ್ರಕೋಶದ ವೈಫಲ್ಯದಿಂದ ಬಳಲುತ್ತಿದ್ದು ಕೊನೆಯಲ್ಲಿ ಬೇರೆ ಅಂಗಾಂಗಳ ಸೋಂಕಿನಿಂದ ಸಹಜ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಆನ್​ಲೈನ್​ ಸಾಲದ ಆ್ಯಪ್​ಗಳಿಂದ ಕಿರುಕುಳ : ಸಾಲ ತೀರಿಸಲೆಂದು ಅಜ್ಜಿಯನ್ನೇ ಕೊಂದ ಮೊಮ್ಮಗಳು ಅಂದರ್

ಇದನ್ನೂ ಓದಿ : ಅಕ್ಕ-ತಂಗಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರ-ಕೊಲೆ ಆರೋಪ

ವಿಮ್ಸ್‌ ಆಸ್ಪತ್ರೆಯು ಉತ್ತಮ ಚಿಕಿತ್ಸಾ ಕೇಂದ್ರವಾಗಿದ್ದು, ಬೇರೆ ಕಡೆಗಳಲ್ಲಿ ಚಿಕಿತ್ಸೆ ಸಫಲವಾಗದಿದ್ದಾಗ ಕೊನೆಯ ಹಂತದಲ್ಲಿ ಚಿಕಿತ್ಸೆಗೆ ಇಲ್ಲಿ ಬರುವುದ್ದರಿಂದ ಸಾವುಗಳು ಹೆಚ್ಚಾಗುತ್ತಿವೆ. ಆದರೆ ಇದೇ ವೇಳೆಯಲ್ಲಿ ವಿದ್ಯುತ್‌ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದೆ. ಹಾಗಾಗಿ ವಿಮ್ಸ್‌ ಆಸ್ಪತ್ರೆ ಸದಾ ರೋಗಿಗಳ ಹಿತಕ್ಕಾಗಿ ಕೆಲಸ ಮಾಡುತ್ತದೆಂದು ಸ್ಥಳಿಯರಿಗೆ ಹಾಗೂ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

3 patients died in Vims Hospital Bellary due to ventilator failure

Comments are closed.