ರಾಜ್ಯಾದ್ಯಂತ ಎಬೋಲಾ ಹೈ ಅಲರ್ಟ್: ಪೀಡಿತ ದೇಶಗಳಿಂದ ಬಂದ್ರೆ 21 ದಿನ ಕ್ವಾರಂಟೈನ್ ಕಡ್ಡಾಯ
ಜಗತ್ತಿನಾದ್ಯಂತ ಎಬೋಲಾ ಖಾಯಿಲೆಯ ಭೀತಿ ಶುರುವಾಗಿದ್ದು, ವಿಶ್ವಾದ್ಯಂತ ತುರ್ತು ಆರೋಗ್ಯ ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ

ಜಗತ್ತಿನಾದ್ಯಂತ ಎಬೋಲಾ ಖಾಯಿಲೆಯ ಭೀತಿ ಶುರುವಾಗಿದ್ದು, ವಿಶ್ವಾದ್ಯಂತ ತುರ್ತು ಆರೋಗ್ಯ ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ . ಭಾರತದಲ್ಲಿ ಪ್ರಸ್ತುತ ಯಾವುದೇ ಎಬೋಲಾ ಪ್ರಕರಣಗಳು ಪತ್ತೆಯಾಗಿಲ್ಲ ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ರಾಜ್ಯದ ಅಂತರರಾಷ್ಟ್ರೀಯ ಹೆಬ್ಬಾಗಿಲುಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಜಾಗತಿಕವಾಗಿ ಹೈ ಅಲರ್ಟ್ ಘೋಷಣೆಯಾಗಿರುವ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಕೂಡ ಎಬೋಲಾ ನಿಯಂತ್ರಣಕ್ಕೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ. ಎಬೋಲಾ ವೈರಲ್ ಬಗ್ಗೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದರೆ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ಎಂದು ಆರೋಗ್ಯ ಇಲಾಖೆ ರಾಜ್ಯದ ಜನತೆಯಲ್ಲಿ ಮನವಿ ಮಾಡಿದೆ.
Also Read :ಮಳೆಗಾಲದ ಸ್ಪೆಷಲ್ : ಗರಿಗರಿಯಾದ ಈರುಳ್ಳಿ ಪಕೋಡ
ಇನ್ನು ರಾಜ್ಯ ಆರೋಗ್ಯ ಇಲಾಖೆ ಕೈಗೊಂಡಿರವ ಕ್ರಮಗಳನ್ನು ಗಮನಿಸುವುದಾದರೆ, ಬೆಂಗಳೂರು ಮತ್ತು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಕಣ್ಗಾವಲಿಗೆ ಒಳಪಡಿಸಲಾಗುತ್ತಿದೆ.ಎಬೋಲಾ ಪೀಡಿತ ದೇಶಗಳಿಂದ ಬಂದ ಪ್ರತಿಯೊಬ್ಬ ಪ್ರಯಾಣಿಕರೂ ಕಡ್ಡಾಯವಾಗಿ 21 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರುವುದು ಕಡ್ಡಾಯವಾಗಿದೆ.
ಶಂಕಿತ ಅಥವಾ ಲಕ್ಷಣಗಳಿರುವ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ನೀಡಲು ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ ಹಾಗೂ ಮಂಗಳೂರಿನ ವೆನ್ಲಾಕ್ ಮತ್ತು ಶ್ರೀನಿವಾಸ್ ಪೋರ್ಟ್ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ಕಾಯ್ದಿರಿಸಲಾಗಿದೆ. ಶಂಕಿತ ಪ್ರಕರಣಗಳ ರಕ್ತದ ಮಾದರಿಗಳನ್ನು ಬೆಂಗಳೂರಿನ ಎನ್‌ಐವಿ (NIV) ಮೂಲಕ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ರವಾನಿಸಿ ತಪಾಸಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.
Also Read : ಸನ್ರೈಸರ್ಸ್ ವಿರುದ್ಧ ಆರ್ಸಿಬಿ ಪರಾಭವ.. ಸೋಲಿನ ನಡುವೆಯೂ ಆರ್ಸಿಬಿಗೆ ಅಗ್ರಸ್ಥಾನ..!
ಎಬೋಲಾ ಗಾಳಿಯ ಮೂಲಕ ಹರಡುವ ಸೋಂಕಲ್ಲ. ಬದಲಿಗೆ ಸೋಂಕಿತರ ದೇಹದ ದ್ರವದ ಸಂಪರ್ಕದಿಂದ ಮಾತ್ರ ಹರಡುವ ಕಾಯಿಲೆಯಾಗಿದೆ. ತೀವ್ರ ಜ್ವರ, ತಲೆನೋವು ಮತ್ತು ಚರ್ಮದ ಮೇಲೆ ಗುಳ್ಳೆಗಳು ಇದರ ಪ್ರಮುಖ ಲಕ್ಷಣಗಳಾಗಿವೆ. ನಾಗರಿಕರು ಸಾಮಾಜಿಕ ಜಾಲತಾಣಗಳ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಪ್ರಕಟಣೆಗಳನ್ನು ಮಾತ್ರ ನಂಬಬೇಕು ಹಾಗೂ ಭಯಪಡದೆ ಜಾಗರೂಕರಾಗಿರಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.



