ಹೃದಯಾಘಾತ ದಿಢೀರ್ ಬರುವುದಿಲ್ಲ : ಮೊದಲೇ ತಿಳಿಯುತ್ತೆ !

0

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದ್ರಲ್ಲೂ ಯುವಕರಂತೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರೋದು ಗಣನೀಯವಾಗಿ ಏರಿಕೆಯಾಗು ತ್ತಿದೆ. ಹಾಗದ್ರೆ ಈ ಹೃದಯಾಘಾತಕ್ಕೆ ಮುಖ್ಯ ಕಾರಣವೇನು? ಇದು ಯಾವ ಕಾರಣದಿಂದ ಬರುತ್ತದೆ. ಇದ್ರಿಂದ ತಪ್ಪಿಸಲು ಪರಿಹಾರ ಮಾರ್ಗಗಳು ಇಲ್ಲಿದೆ ನೋಡಿ.

ಬದಲಾದ ಜೀವನ ಶೈಲಿಯಿಂದಾಗಿನೇ ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳು ಕಂಡುಬರುತ್ತದೆ. ಅದ್ರಲ್ಲೂ ಈಗಿನ ಒತ್ತಡದ ಜೀವನ ಶೈಲಿಯಲ್ಲಿ ಅವಸರವಸರವಾಗಿ ಆಹಾರ ಸೇವಿಸೋದು, ಯೋಗ, ವ್ಯಾಯಮವಂತೂ ದೂರದ ಮಾತು. ಪ್ರತಿನಿತ್ಯ ನಾವೂ ಸೇವಿಸೋ ಆಹಾರದ ಜೊತೆ ಯೋಗಾಸಾನ, ವ್ಯಾಯಮ, ವಾಕಿಂಗ್ ಮಾಡಿದ್ರಂತೂ ಇಂತಹ ಕಾಯಿಲೆಗಳಿಂದ ದೂರವಿರ ಬಹುದು. ಹಾಗಾದ್ರೆ ಈ ಹೃದಯಾಘಾತ ಹೇಗೆ ಬರುತ್ತದೆ.

ಹೃದಯಾಘಾತ ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಹಿಂದೆಲ್ಲಾ ವಯಸ್ಸಾದವರಿಗೆ ಹೃದಯಾಘಾತವಾಗುತ್ತೆ ಅಂತಾ ಹೇಳಲಾಗುತ್ತಿತ್ತು. ಆದ್ರೀಗ ಯುವಕ, ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಸಾಮಾನ್ಯವಾಗಿ ಹೃದಯಾಘಾತಕ್ಕೂ ಮುನ್ನ ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಹೃದಯಾಘಾತದ ಲಕ್ಷಣಗಳು ಕಂಡು ಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಗ್ಯಾಸ್ಟ್ರಿಕ್ನಿಂದ ಎದೆನೋವು ಎಂದು ಬಾವಿಸಿ ಮುಂದೂಡಬಾರದು.

ಇದನ್ನೂ ಓದಿ : ಪೋಷಕರೇ ಮಕ್ಕಳ ಬಗ್ಗೆ ಇರಲಿ ಎಚ್ಚರ….ಇದು ಕೊರೊನಾಕ್ಕಿಂತಲೂ ಮಾರಕ !

ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ, ಮುನ್ಸೂಚನೆ ಅನ್ನುವುದು ಅರಿವಿಗೆ ಬಾರದಾಗಿ ಹೋಗುತ್ತಿದೆ. ಸಾಮಾನ್ಯವಾಗಿ ವಿಪರೀತ ಬೆವರುವುದು, ಸ್ತಾಗುವುದು, ಯಾವುದಾದರು ರಟ್ಟೆ ವಿಪರೀತ ನೋಯುವುದು, ಎದೆ ಕಿವುಚಿದಂತಹ ಲಕ್ಷಣಗಳು ಕಂಡುಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸುವಂತಿಲ್ಲ. ಯಾಕೆಂದ್ರೆ ಇವುಗಳೇ ಹೃದಯಾಘಾತದ ಲಕ್ಷಣಗಳು. ಪ್ರಮುಖವಾಗಿ ನಡಿಗೆ, ಮೆಟ್ಟಿಲು ಏರುವ ಸಂದರ್ಭಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇಂತಹ ಲಕ್ಷಣ ಕಂಡುಬಂದ್ರೆ ಕೂಡಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು.

ಗೊಲ್ಡನ್ ಹವರ್
ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯವನ್ನು ಗೋಲ್ಡನ್ ಹವರ್ ಅಂತ ಹೇಳಲಾಗುತ್ತಿದೆ. ಯಾವುದೇ ಕಾರಣಕ್ಕೂ ಈ ಸಮಯವನ್ನು ವ್ಯರ್ಥ ಮಾಡಬಾರದು. ಈ ಅವಧಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡ್ರೆ ಖಂಡಿತಾ ಬದುಕುಳಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೃದಯಾಘಾತದ ಮೊದಲ ಅರ್ಧ ಗಂಟೆಯ ಅವಧಿಯಲ್ಲಿ ಸಾಧ್ಯವಾದಷ್ಟು ಆಸ್ಪತ್ರೆಯನ್ನು ತಲುಪುವ ಕಾರ್ಯವನ್ನು ಮಾಡಲೇ ಬೇಕು. 40 ವರ್ಷದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸಾವಿಗೆ ಹೆದರಬಾರದು, ಸಾವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು.

ಯೋಗ, ನಿತ್ಯ ನಡಿಗೆ, ಮಾಂಸಾಹಾರ, ಮೊಟ್ಟೆ ತಿನ್ನದೆ ಶುದ್ಧ ಶಾಖಾಹಾರಿ ಯಾಗಿರುವುದರಿಂದ, ಬೊಜ್ಜು ದಪ್ಪ ಇಲ್ಲದೆ ಇರುವುದರಿಂದ, ತೆಳ್ಳಗೆ ಇರುವುದರಿಂದ, ಚಿಕ್ಕ ವಯಸ್ಸು ಇರುವುದರಿಂದ ಹೃದಯಾಘಾತ ಆಗುವುದಿಲ್ಲ ಎಂಬುದು ತಪ್ಪು ತಿಳುವಳಿಕೆ. ಹೃದಯಾಘಾತಕ್ಕೆ ಅನುವಂಶಿಕ ಕಾರಣಗಳು ಜೊತೆಗೆ ಇತರೆ ಕಾರಣಗಳು ಇರುತ್ತವೆ. ಪ್ರತಿಯೊಬ್ಬರಿಗೂ ಹೃದಯದಲ್ಲಿ ರಕ್ತದ ಹೆಪ್ಪು (ಕ್ಲಾಟ್) ಸ್ವಲ್ಪವಾದರೂ ಇದ್ದೇ ಇರುತ್ತದೆ, ನಿಧಾನವಾಗಿ ಹೆಚ್ಚಾಗುತ್ತಿರುತ್ತದೆ. ನಡಿಗೆ, ವ್ಯಾಯಾಮ, ಸದಾ ಚಟುವಟಿಕೆ, ಸರಿಯಾದ ಆಹಾರ ಕ್ರಮ, ಸರಳ ಜೀವನ ಇಲ್ಲವಾದಲ್ಲಿ ಬೇಗ ಹೆಪ್ಪುಗಟ್ಟುವುದು (ಕ್ಲಾಕ್) ಹೆಚ್ಚಾಗುತ್ತಿರುತ್ತದೆ, ಆದರೆ ಮೇಲಿನ ಕಾರ್ಯ ಚಟುವಟಿಕೆಗಳನ್ನು ಪಾಲಿಸಿದರೆ ನಿಯಂತ್ರಣದಲ್ಲಿರುತ್ತದೆ.

ಈ ಹೃದಯದ ಖಾಯಿಲೆ ಇ.ಸಿ.ಜಿ ಮಾಡಿದಾಗ ಗೊತ್ತಾಗುತ್ತದೆ. ಆಶ್ಚರ್ಯವೆಂದರೆ ಎಷ್ಟೋ ಜನಕ್ಕೆ ಇ.ಸಿ.ಜಿ ಮತ್ತು ಎಕೋಗ್ರಾಮ್ ಮಾಡಿದಾಗ ಹೃದಯದ ಖಾಯಿಲೆ ತಿಳಿಯುವುದಿಲ್ಲ. ಆದರೆ ಟಿ.ಎಂ.ಟಿ ಪರೀಕ್ಷೆ ಮಾಡಿದಾಗ ಖಂಡಿತ ಸ್ವಲ್ಲ ಪ್ರಮಾಣವಾದರು ಪತ್ತೆ ಹಚ್ಚುತ್ತಾರೆ, ಆಗ ಅಂಜಿಯೋಗ್ರಾಮ್ ಮಾಡಿಸಬೇಕಾಗುತ್ತದೆ. ಅಂಜಿಯೋಗ್ರಾಮ್ ಪರೀಕ್ಷೆಯಲ್ಲಿ ಅತ್ಯಂತ ನಿಖರವಾಗಿ ಸ್ಪಷ್ಟವಾಗಿ ಕ್ಲಾಟ್ ಪ್ರಮಾಣ ಗೊತ್ತಾಗುತ್ತದೆ.

ಇದನ್ನೂ ಓದಿ : ನೀವೂ ದೇಹದ ಅತ್ಯಂತ ಮುಖ್ಯ ಭಾಗವನ್ನೇ ತೊಳೆಯುತ್ತಿಲ್ಲ !

ಕ್ಲಾಟ್ಗಳು ಒಂದಕ್ಕಿಂತ ಹೆಚ್ಚು ಕೂಡ ಮೇಲ್ಪಟ್ಟು ಕೂಡ ಪತ್ತೆಯಾಗಿರುವುದು. ನಂತರ ಸೂಕ್ತ ಚಿಕಿತ್ಸೆ ಪಡೆದುಕೊಂಡು ಆರಾಮವಾಗಿ ಆರೋಗ್ಯ ವಾಗಿರಬಹುದು. ಏನು ಹೆದರುವ ಅವಶ್ಯಕತೆ ಇಲ್ಲ. ಸದಾ ಚಟುವಟಿಕೆಯಿಂದ ಇದ್ದರೆ ತಾನು ಹೃದ್ರೋಗಿ ಎಂದು ಅನಿಸುವುದೇ ಇಲ್ಲ, ಎಲ್ಲರಂತೆ ಸುಖ ಜೀವನ ನಡೆಸಬಹುದು. ಬೇರೆ ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ಹೊಂದಲು ಸಮಯವಿರುತ್ತದೆ.

ಆದರೆ. ಹೃದಯ ಖಾಯಿಲೆ ಹಾಗಲ್ಲ, ಕೆಲವೊಮ್ಮೆ ಒಂದು ನಿಮಿಷ ಕೂಡ ಸಮಯವನ್ನೇ ನೀಡುವುದಿಲ್ಲ, ತಕ್ಷಣ ಸಾವಿಗೆ ನೂಕಿ ಬಿಡುತ್ತದೆ. ಬದುಕಲು ಅದೃಷ್ಟ ಬೇಕು.ವೈದ್ಯರು ಹೇಳುವುದು ಒಂದೇ. ಉತ್ತಮ ಆಹಾರ ಕ್ರಮ ಅನುಸರಿಸಿ, ಸದಾ ಚಟುವಟಿಕೆಯಿಂದ ಇರಿ. ಸರಳ ಜೀವನ ನಡೆಸಿ. ನಿಮ್ಮ ಅಮೂಲ್ಯವಾದ ಬದುಕನ್ನ ರೂಪಿಸಿ.

ಇದನ್ನೂ ಓದಿ : ಹೀಗೆ ಮಾಡಿದ್ರೆ ಅಸಿಡಿಟಿ ನಿಮ್ಮ ಹತ್ತಿರವೂ ಸುಳಿಯುವುದಿಲ್ಲ

( Heart attack doesn’t come quickly: know early ! )

Leave A Reply

Your email address will not be published.