ಅತಿಯಾದ ಬೇಳೆಕಾಳುಗಳ ಸೇವನೆಯಿಂದ ದೇಹದ ಮೇಲಾಗುತ್ತದೆ ಈ ಪ್ರತಿಕೂಲ ಪರಿಣಾಮ

ಉತ್ತಮ ಗುಣಮಟ್ಟದ ಪ್ರೋಟೀನ್ ಮತ್ತು ಫೈಬರ್ ಸಮೃದ್ಧವಾಗಿರುವ ತೊಗರಿಬೇಳೆಯು (side effects of lentils) ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಹೆಚ್ಚಿನ ಮನೆಗಳಲ್ಲಿ ತೊಗರಿಬೇಳೆಯನ್ನು ಪ್ರತಿದಿನ ಸೇವನೆ ಮಾಡುತ್ತಾರೆ. ವೈದ್ಯರ ಪ್ರಕಾರ , ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಸಮೃದ್ಧವಾಗಿರುವ ಬೇಳೆಕಾಳುಗಳನ್ನು ಸೇವಿಸುವುದರಿಂದ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ಗಳು ಕಡಿಮೆಯಾಗುತ್ತದೆ ಎನ್ನಲಾಗಿದೆ.

ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೇಳೆಕಾಳುಗಳು ಆರೋಗ್ಯಕ್ಕೆ ಅನೇಕ ವಿಧಗಳಲ್ಲಿ ಪ್ರಯೋಜನಕಾರಿಯಾಗಿದ್ದರೂ, ಕೆಲವೊಮ್ಮೆ ಆರೋಗ್ಯಕರ ಪದಾರ್ಥಗಳನ್ನು ಸಹ ಅಧಿಕವಾಗಿ ಸೇವಿಸಿದರೆ, ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಾಗಬಹುದು, ಹೆಚ್ಚಿನ ಪ್ರಮಾಣದ ಬೇಳೆಕಾಳುಗಳನ್ನು ಸೇವಿಸುವುದರಿಂದ ದೇಹಕ್ಕೆ ಹಾನಿ ಉಂಟಾಗುತ್ತದೆ, ಇದರಲ್ಲಿ ಉದರ ಸಂಬಂಧಿ ಸಮಸ್ಯೆಗಳು ಸಾಮಾನ್ಯವಾಗಿದೆ. ಬೇಳೆಕಾಳುಗಳನ್ನು ಅತಿಯಾಗಿ ತಿನ್ನುವುದರಿಂದ ಏನೆಲ್ಲ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದಕ್ಕೆ ಇಲ್ಲಿದೆ ವಿವರಣೆ :

ನೀವು ಹೆಚ್ಚಿನ ಪ್ರಮಾಣದಲ್ಲಿ ಬೇಳೆಕಾಳುಗಳನ್ನು ಸೇವಿಸಿದರೆ, ಅದು ನಿಮ್ಮ ಮೂತ್ರಪಿಂಡಗಳ ಮೇಲೆ ನೇರ ಪರಿಣಾಮ ಬೀರಬಹುದು. ಅತಿಯಾಗಿ ಬೇಳೆಕಾಳುಗಳನ್ನು ತಿನ್ನುವುದರಿಂದ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಉಂಟಾಗುತ್ತದೆ.

ಹೆಚ್ಚು ಬೇಳೆಕಾಳುಗಳನ್ನು ತಿನ್ನುವುದರಿಂದ ಉದರ ಸಂಬಂಧಿ ಸಮಸ್ಯೆಗಳು ಉಂಟಾಗಬಹುದು. ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಬೇಳೆಕಾಳುಗಳನ್ನು ಸೇರಿಸುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ. ಇದಲ್ಲದೇ ಬೇಳೆಕಾಳುಗಳನ್ನು ತಿನ್ನುವುದರಿಂದ ಅನೇಕರಿಗೆ ಆಸಿಡಿಟಿಯೂ ಇರುತ್ತದೆ.

ಹೆಚ್ಚಿನ ಬೇಳೆಕಾಳುಗಳ ಸೇವನೆಯಿಂದ ದೇಹವು ಡಿಟಾಕ್ಸಿಫಾಯ್​ ಆಗುವ ಸಾಧ್ಯತೆಗಳಿವೆ.ಅತಿಯಾದ ಬೇಳೆಗಳ ಸೇವನೆಯಿಂದ ದೇಹದಲ್ಲಿರುವ ವಿಷಕಾರಿ ಅಂಶಗಳು ಹೊರ ಹೋಗುವುದಿಲ್ಲ.ಇದರಿಂದ ನಿಮ್ಮ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರಬಹುದು.

ಇದನ್ನು ಓದಿ : Best Smartphones Under 5000: ಕಡಿಮೆ ಬೆಲೆಗೆ ಹೆಚ್ಚು ಫೀಚರ್ಸ್‌; 5 ಸಾವಿರದೊಳಗಿನ ಉತ್ತಮ ಸ್ಮಾರ್ಟ್‌ಫೋನ್‌ಗಳಿವು

health news side effects of lentils may cause stone in kidney

Comments are closed.