ಸಾಗರ್ ರಾಣಾ ಹತ್ಯೆ ಪ್ರಕರಣ : ಕುಸ್ತಿಪಟು ಸುಶೀಲ್ ಕುಮಾರ್ ಗೆ ಜಾಮೀನು ನಿರಾಕರಣೆ

ನವದೆಹಲಿ : ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಕುಸ್ತಿ ಪಟು ಸುಶೀಲ್ ಕುಮಾರ್ ಅವರಿಎ ನಿರೀಕ್ಷತ ಜಾಮೀನು ನೀಡಿಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.

ಮೇ 4 ರಂದು 97 ಕೆಜಿ ಗ್ರೀಕೋ-ರೋಮನ್ ವಿಭಾಗದಲ್ಲಿ ಸ್ಪರ್ಧಿಸಿದ್ದ ರಾಣಾ ಹಾಗೂ ಸುಶೀಲ್ ಕುಮಾರ್ ಅವರ ನಡುವಿನ ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಸುಶೀಲ್ ಕುಮಾರ್ ಮತ್ತು ಸಹಚರರಾದ ಅಜಯ್, ಪ್ರಿನ್ಸ್ ದಲಾಲ್, ಸೋನು, ಸಾಗರ್, ಅಮಿತ್ ಹಾಗೂ ಇತರರು ಸೇರಿಕೊಂಡು ಮೇ 4 ರಂದು ದೆಹಲಿಯ ತ್ರಾಸಲ್ ಕ್ರೀಡಾಂಗಣದಲ್ಲಿ ಸಹ ಕುಸ್ತಿಪಟು ಸಾಗರ್ ರಾಣಾ (23 ವರ್ಷ) ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾಗರ್ ರಾಣಾ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಸುಶೀಲ್ ಕುಮಾರ್ ಹಾಗೂ ಇತರ 9 ಮಂದಿಯ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಅಲ್ಲದೇ ಪೊಲೀಸರು ಕುಸ್ತಿಪಟು ವಿರುದ್ಧ ಲುಕ್- circ ಟ್-ಸರ್ಕ್ಯುಲರ್ (ಎಲ್ಒಸಿ) ಹೊರಡಿಸಿದ್ದರು. ಪ್ರಕರಣದ ಬೆನ್ನಲ್ಲೇ ಸುಶೀಲ್ ಕುಮಾರ್ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಸ್ತಿಪಟು ಸುಶೀಲ್ ಕುಮಾರ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತಹ ಎಲ್ಲಾ ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ತಮ್ಮ ಕಕ್ಷೀಧಾರರಾರ ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡುವಂತೆ ವಕೀಲರು ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.ತನ್ನ ವಿರುದ್ಧದ ತನಿಖೆ ಪಕ್ಷಪಾತವಾಗಿದೆ ಮತ್ತು ಅವರ ಪ್ರತಿಷ್ಠೆಗೆ ಧಕ್ಕೆ ತರುವಂತೆ ಆರೋಪ ಮಾಡಲಾಗಿದೆ ಎಂದು ಸುಶೀಲ್ ಕುಮಾರ್ ತಮ್ಮ ವಕೀಲರ ಮೂಲಕ ನ್ಯಾಯಾಲಯದ ಮುಂದೆ ವಾದಿಸಿದ್ದರು.

ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ), ಅಪಹರಣ (365), ಮತ್ತು 120-ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸುಶೀಲ್ ಕುಮಾರ್ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಹಾಗೂ ಸಹಚರರ ಬಗ್ಗೆ ಸುಳಿವು ನೀಡಿದ್ರೆ 50 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಕುಮಾರ್ ಕಂಚಿನ ಪದಕ ಮತ್ತು 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

https://kannada.newsnext.live/tamil-actor-sanamshetty-hot-photos-kannada-movies-bangalore/
https://kannada.newsnext.live/question-paper-leak-case-kingpin-shivakumar-death-corona-virus/

Comments are closed.