ಹೋಟೆಲ್​ ಮಾಲೀಕರ ಗ್ಯಾಸ್​ ಸಮಸ್ಯೆಗೆ ಕೊನೆಗೂ ಪರಿಹಾರ : ಗ್ಯಾಸ್​ ಪೂರೈಕೆ ಪ್ರಮಾಣದಲ್ಲಿ ಏರಿಕೆಗೆ ಕೇಂದ್ರದ ಅಸ್ತು

ಹೋಟೆಲ್​ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಲಿಂಡರ್​ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ಹೋಟೆಲ್​ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಕಳೆದ 12 ದಿನಗಳಿಂದ ವಾಣಿಜ್ಯ ಗ್ಯಾಸ್​ ಸಿಲಿಂಡರ್​ ಇಲ್ಲದೇ ಸಂಕಷ್ಟ ಅನುಭವಿಸುತ್ತಿದ್ದ ಹೋಟೆಲ್​ ಮಾಲೀಕರಿಗೆ ಕೊನೆಗೂ ಪರಿಹಾರ ದೊರಕಿದೆ.

ಹೋಟೆಲ್​ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಲಿಂಡರ್​ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ಹೋಟೆಲ್​ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರಿನ ಹೋಟೆಲ್​ಗಳಿಗೆ ಅತೀ ಕಡಿಮೆ ಪ್ರಮಾಣದಲ್ಲಿ ಸಿಲಿಂಡರ್​ ಪೂರೈಕೆ ಮಾಡಲಾಗುತ್ತಿದೆ ಎಂದು ಬೆಂಗಳೂರು ಹೋಟೆಲ್​ ಮಾಲೀಕರ ಸಂಘ ಅಸಮಾಧಾನ ಹೊರಹಾಕುತ್ತಲೇ ಬಂದಿತ್ತು. ಅಲ್ಲದೇ ಈ ಸಂಬಂಧ ಪ್ರಧಾನಿ ಮೋದಿ ಅವರಿಗೂ ಪತ್ರ ಬರೆದಿತ್ತು. ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಕೇಂದ್ರ ಸರ್ಕಾರದಿಂದ ಈ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ಗ್ಯಾಸ್‌ ಬುಕ್ಕಿಂಗ್‌ ಚಿಂತೆ ಬಿಡಿ: ಕೇವಲ ಒಂದು ನಿಮಿಷದಲ್ಲಿ ಸಿಲಿಂಡರ್ ಕಾಯ್ದಿರಿಸಲು ಇಲ್ಲಿದೆ ಸುಲಭ ದಾರಿ

ಕೇಂದ್ರ ಪೆಟ್ರೋಲಿಯಂ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಯುದ್ಧಪೂರ್ವ ಕಾಲದಲ್ಲಿ ಪೂರೈಕೆ ಮಾಡಲಾಗುತ್ತಿದ್ದ ಸಿಲಿಂಡರ್​ನ 50 ಪ್ರತಿಶತ ಸಿಲಿಂಡರ್​ ಪೂರೈಕೆಗೆ ಆದೇಶಿಸಲಾಗಿದೆ. ಕೇಂದ್ರ ಸರ್ಕಾರದ ಈ ಆದೇಶದಿಂದಾಗಿ ಸಂಪೂರ್ಣ ನೆಲಕಚ್ಚಿದ್ದ ಹೋಟೆಲ್​ ಉದ್ಯಮಕ್ಕೆ ಮರಭೂಮಿಯಲ್ಲಿ ಒಯಿಸಿಸ್​ ದೊರಕಿದಂತೆ ಆಗಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories