ಗೋವಾದ ನೈಟ್ಕ್ಲಬ್ನಲ್ಲಿ ಅಗ್ನಿ ನರ್ತನಕ್ಕೆ 23 ಬಲಿ : ಉನ್ನತ ತನಿಖೆಗೆ ಆದೇಶ

Goa Arpora Night club fire accident : ಗೋವಾ : ಉತ್ತರ ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಗೋವಾ ಸಿಎಂ ಆದೇಶಿದಿದ್ದಾರೆ.
ಗೋವಾದ ರಾಜಧಾನಿ ಪಣಜಿಯಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ಈ ಜನಪ್ರಿಯ ನೈಟ್ಕ್ಲಬ್ ಕಳೆದ ವರ್ಷವಷ್ಟೆ ಆರಂಭಗೊಂಡಿತ್ತು.
ಘಟನಾ ಸ್ಥಳದಿಂದ ಇದುವರೆಗೆ ಒಟ್ಟು 23 ಶವಗಳನ್ನು ಹೊರತೆಗೆಯಲಾಗಿದ್ದು, ಬಾಂಬೊಲಿಂನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ನಡುರಾತ್ರಿಯಿಂದಲೇ ಅಗ್ನಿಶಾಮಕದಳ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Also Read : ಶಿಸ್ತು ಉಲ್ಲಂಘನೆ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ನೋಟಿಸ್ ಜಾರಿ
ಮಧ್ಯರಾತ್ರಿಯ ವೇಳೆಯಲ್ಲಿ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂದು ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಹಲವರು ಸಜೀವವಾಗಿ ದಹನವಾಗಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದುರಂತದಲ್ಲಿ ಸಾವನ್ನಪ್ಪಿರುವ ಬಹುತೇಕರು ಕ್ಲಬ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಅಲ್ಲದೇ ನಾಲ್ವರು ಪ್ರವಾಸಿಗರು ಕೂಡ ಮೃತಪಟ್ಟಿದ್ದಾರೆ. ನೈಟ್ಕ್ಲಬ್ ನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಇರುವುದು ಘಟನೆ ಕಾರಣ ಎನ್ನಲಾಗುತ್ತಿದೆ.
ಅಗ್ನಿದುರಂತದ ಬೆನ್ನಲ್ಲೇ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ನೈಟ್ಕ್ಲಬ್ನಲ್ಲಿ ನಡೆದಿರುವ ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇನ್ನು ಮೃತರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
23 killed Goa Arpora Night club fire accident cylinder Blast



