ವಿಮಾನ ಪತನ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿ ಐವರು ಬಲಿ
Ajit Pawar Died : ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಪತನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮತ್ತು ಎನ್ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ (Ajith Pawar) (66) ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಬಾರಾಮತಿ ಪ್ರದೇಶದಲ್ಲಿ ವಿಮಾನವು ಇಳಿಯುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.ಅಜಿತ್ ಪವಾರ್, ಅವರ ಒಬ್ಬ ಭದ್ರತಾ ಅಧಿಕಾರಿ (PSO), ಒಬ್ಬ ಸಹಾಯಕ ಮತ್ತು ಇಬ್ಬರು ಪೈಲಟ್ಗಳು ಸೇರಿದಂತೆ ಒಟ್ಟು ಐವರು ಈ ದುರಂತದಲ್ಲಿ ಬಲಿಯಾಗಿದ್ದಾರೆ.
ದೆಹಲಿ ಮೂಲದ ‘ವಿಎಸ್ಆರ್’ (VSR) ಚಾರ್ಟರ್ ಕಂಪನಿಗೆ ಸೇರಿದ ಲಿಯರ್ಜೆಟ್ 45 (Learjet 45) ಎಂಬ ವಿಮಾನವು ಅಪಘಾತಕ್ಕೀಡಾಗಿದೆ. ಬುಧವಾರ ಬೆಳಗ್ಗೆ (ಜನವರಿ 28, 2026) ಈ ದುರ್ಘಟನೆ ನಡೆದಿದೆ.
Also Read: ಯೋಗಿ ಆದಿತ್ಯನಾಥ್ vs ಶಂಕರಾಚಾರ್ಯ: ಸಿಎಂ ಪರ ನಿಂತ ಅಯೋಧ್ಯೆ ಅಧಿಕಾರಿ ರಾಜೀನಾಮೆ!
ಪ್ರಾಥಮಿಕ ವರದಿಗಳ ಪ್ರಕಾರ, ಬಾರಾಮತಿಯಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ವಿಮಾನವು ನಿಯಂತ್ರಣ ತಪ್ಪಿ ಪತನಗೊಂಡಿದೆ. ವಿಮಾನದಲ್ಲಿದ್ದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಮಹಾರಾಷ್ಟ್ರ ರಾಜಕೀಯದ ಪ್ರಭಾವಿ ನಾಯಕನ ಹಠಾತ್ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿಯುತ್ತಿದೆ.



