ಕಂದಕಕ್ಕೆ ಉರುಳಿದ ಸೇನಾ ವಾಹನ..10 ಯೋಧರು ಹುತಾತ್ಮ

Army vehicle falls : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನ ಭೀಕರ ರಸ್ತೆ ಅಪಘಾತಕ್ಕೆ ಒಳಪಟ್ಟಿದೆ. ಈ ದುರಂತದಲ್ಲಿ ಭಾರತೀಯ ಸೇನೆಯ 10 ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಪರ್ವತ ಪ್ರದೇಶದಲ್ಲಿದ್ದ ಪೋಸ್ಟ್​ಗೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಸೇನಾ ವಾಹನವು ನಿಯಂತ್ರಣ ತಪ್ಪಿದ ಪರಿಣಾಮ 200 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.

ಭದೇರ್ವಾ – ಚಂಬಾ ಅಂತಾರಾಜ್ಯ ಹೆದ್ದಾರಿಯ ಖನ್ನಿ ಟಾಪ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ವಾಹನದಲ್ಲಿ ಒಟ್ಟು 17 ಮಂದಿ ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ,

ನಾಲ್ವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಅಪಘಾತದಲ್ಲಿ ಗಾಯಗೊಂಡು ಉದಯ್​ಪುರ ಮಿಲಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರು ಮಂದಿ ಯೋಧರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

Also Read : ಮಂಗಳೂರು: ಇನ್​ಸ್ಟಾಗ್ರಾಂ ಖ್ಯಾತಿಯ ಆಶಾ ನಾಗು ( Asha Pandit) ನಿಧನ

ಪ್ರಧಾನಿ ಮೋದಿ ಈ ಘಟನೆಗೆ ಸಂತಾಪ ಸೂಚಿಸಿದ್ದು, ದೋಡಾದಲ್ಲಿ ಸಂಭವಿಸಿದ ಈ ಅಪಘಾತದಿಂದ ನನಗೆ ನೋವಾಗಿದೆ. ನಮ್ಮ ಧೈರ್ಯಶಾಲಿ ಸೈನಿಕರನ್ನು ಕಳೆದುಕೊಂಡಿರುವುದು ದೇಶಕ್ಕೆ ಅಪಾರ ನಷ್ಟ. ಅವರ ಸೇವೆ ಮತ್ತು ತ್ಯಾಗವನ್ನು ರಾಷ್ಟ್ರ ಸದಾ ಸ್ಮರಿಸಲಿದೆ.

ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು X’ನಲ್ಲಿ ಪೋಸ್ಟ್ ಮಾಡಿದ್ದಾರೆ.

Also Read : ಈ 94 ಲಕ್ಷ ರೈತರ ಖಾತೆಗೆ ಫೆಬ್ರವರಿಯಲ್ಲಿ 4,000 ರೂಪಾಯಿ ಜಮಾ

Army vehicle falls into ditch, 10 soldiers martyred in Jammu Kashmir

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories