ಬಿಹಾರ ಚುನಾವಣೆ ಎನ್ಡಿಎ ಮೈತ್ರಿಕೂಟಕ್ಕೆ ಗೆಲುವು : ಕ್ಲೀನ್ ಸ್ವೀಪ್ ಮಾಡ್ತಾರಾ ಮೋದಿ

Bihar Election Result 2025 : ಬಿಹಾರ : ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಎನ್ಡಿಎ ಮೈತ್ರಿ ಕೂಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಬಹುತೇಕ ಸ್ಪಷ್ಟವಾದಂತಿದೆ.
ಬಿಜೆಪಿ ಹಾಗೂ ಜೆಡಿಯು ಪಕ್ಷಗಳು ಬಿಹಾರದಲ್ಲಿ ಮ್ಯಾಜಿಕ್ ಮಾಡಿದೆ. 243 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬರೋಬ್ಬರಿ 190ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಎನ್ಡಿಎ ಮೈತ್ರಿಕೂಡ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಬಿಜೆಪಿ 75, ಜೆಡಿಯು 77, ಕಾಂಗ್ರೆಸ್ 12 ಹಾಗೂ ಆರ್ಜೆಡಿ 44 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಸದ್ಯದ ಚುನಾವಣಾ ಫಲಿತಾಂಶವನ್ನು ನೋಡಿದ್ರೆ ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.
ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್ಡಿಎ ಸರಕಾರ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಕಳೆದ ಚುನಾವಣೆಗೆ ಹೋಲಿಸಿದ್ರೆ ನಿತೇಶ್ ಕುಮಾರ್ ನೇತೃತ್ವದ ಜೆಡಿಯು ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಬಿಜೆಪಿ ಕೂಡ ತನ್ನ ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಆದರೆ ಕಾಂಗ್ರೆಸ್ ಪಕ್ಷ ಹಲವು ಸ್ಥಾನಗಳನ್ನು ಕಳೆದುಕೊಂಡಿದೆ.
ಇದನ್ನೂ ಓದಿ : ನಂದಿನಿ ಬೇಡವೆಂದ ಟಿಟಿಡಿಗೆ ಮಹಾಮೋಸ : ತಿರುಪತಿ ಪ್ರಸಾದ ವಿವಾದಕ್ಕೆ ಟ್ವಿಸ್ಟ್
ಬಿಹಾರದಲ್ಲಿ ಅಧಿಕಾರಕ್ಕೇರಲು 122 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ. ಆದರೆ ಎನ್ಡಿಎ ಮೈತ್ರಿಕೂಟ ಬಿಹಾರದಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆಯುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದೆ. ಈಗಾಗಲೇ ಬಿಹಾರದಲ್ಲಿ ಅಂತಹದ್ದೊಂದು ಚಿತ್ರಣ ಹೊರಬಿದ್ದಿದೆ.
ಬಿಹಾರದಲ್ಲಿ ಎನ್ಡಿಎ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುತ್ತೆ ಅಂತಾ ಈ ಬಾರಿ ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿದ್ದವು. ಈ ಬಿಹಾರ ಚುನಾವಣೆಯ ವಿಚಾರದಲ್ಲಿ ಚುನಾವಣಾ ಸಮೀಕ್ಷೆಗಳನ್ನೂ ಮೀರಿ ಎನ್ಡಿಎ ಮುನ್ನೆಡೆದಿದೆ.
ಇದನ್ನೂ ಓದಿ : ದತ್ತುಪುತ್ರನಿಗೂ ಅನುಕಂಪದ ಆಧಾರದಲ್ಲಿ ಉದ್ಯೋಗ : ಹೈಕೋರ್ಟ್ ಮಹತ್ವದ ತೀರ್ಪು
ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ಡಿಎ 137 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಹೇಳಲಾಗಿತ್ತು. ಆದರೆ ಬಿಜೆಪಿ ಹಾಗೂ ಜೆಡಿಯು ಇದೀಗ 200ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಸೂಚನೆ ನೀಡಿದೆ.
Bihar Election Result 2025 NDA World Record Narendra Modi Nithesh Kumar Big win



