400 ಮೀಟರ್ ಆಳದ ಕಂದಕಕ್ಕೆ ಉರುಳಿದ ಖಾಸಗಿ ಬಸ್;‌ ಐವರ ದುರ್ಮರಣ

Shimla Bus Accident: ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಲನ್‌ನಿಂದ ಕುಪ್ವಿಗೆ ತೆರಳುತ್ತಿದ್ದ ಖಾಸಗಿ ಬಸ್ ಹರಿಪುರಧರ್ ಬಳಿಯ ರಾಜ್‌ಗಢ್ ಎಂಬಲ್ಲಿ ನಿಯಂತ್ರಣ ತಪ್ಪಿ ಸುಮಾರು 400 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಶುಕ್ರವಾರದಂದು ಈ ದುರ್ಘಟನೆ ನಡೆದಿದ್ದು, ಬಸ್ ಕಡಿದಾದ ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನಾ ಸ್ಥಳದಲ್ಲಿ ಕಿಕ್ಕಿರಿದು ತುಂಬಿದ್ದ ಪ್ರಯಾಣಿಕರ ಚೀರಾಟ ಮುಗಿಲು ಮುಟ್ಟಿತ್ತು. ಬಸ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ಸವಾಲಾಗಿದ್ದ ರಕ್ಷಣಾ ಕಾರ್ಯ:
ಅಪಘಾತ ಸಂಭವಿಸಿದ ಪ್ರದೇಶವು ಅತ್ಯಂತ ಕಡಿದಾದ ಮತ್ತು ದುರ್ಗಮವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಯಿತು. ಸ್ಥಳೀಯ ಗ್ರಾಮಸ್ಥರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲದೆ, ಹಗ್ಗ ಮತ್ತು ಸ್ಟ್ರೆಚರ್‌ಗಳ ಸಹಾಯದಿಂದ ಗಾಯಾಳುಗಳನ್ನು ಮೇಲಕ್ಕೆತ್ತಲು ನೆರವಾದರು. ಗಾಯಾಳುಗಳನ್ನು ಹರಿಪುರಧರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಸಿಎಂಗೊಂದು ಕಾನೂನು ಶಾಸಕರಿಗೊಂದು ಕಾನೂನಿದ್ಯಾ’ : ನಳೀನ್​ ಕುಮಾರ್ ಕಟೀಲ್​ ಕಿಡಿ

ಗಣ್ಯರ ಸಂತಾಪ:
ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. “ಈ ದುರಂತ ನನ್ನ ಮನಸ್ಸಿಗೆ ಆಳವಾದ ನೋವು ತಂದಿದೆ. ಮೃತರ ಕುಟುಂಬಗಳಿಗೆ ಧೈರ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಸಂತ್ರಸ್ತರಿಗೆ ಕೂಡಲೇ ವೈದ್ಯಕೀಯ ನೆರವು ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಪರಿಹಾರ ಘೋಷಣೆ:
ಪ್ರಧಾನ ಮಂತ್ರಿ ಕಾರ್ಯಾಲಯವು (PMO) ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳ ಪರಿಹಾರ ಘೋಷಿಸಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories