ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆ ಸುದ್ದಿ ತಿಳಿಯುತ್ತಿದ್ದಂತೆಯೇ ಜಂತರ್ ಮಂತರ್‌ನಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರು "ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ" ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. CJP ಸ್ಥಾಪಕ ಅಭಿನೀತ್ ಡಿಪ್ಕೆ ಮಾತನಾಡಿ, "ಜನರ ಹಾಗೂ ಯುವಜನರ ಐಕ್ಯಮತ್ಯದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ" ಎಂದು ತಿಳಿಸಿದರು.

ನವದೆಹಲಿ: ‘ನೀಟ್’ (NEET) ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನಡೆಸುತ್ತಿದ್ದ ತಿಂಗಳ ಸುದೀರ್ಘ ಪ್ರತಿಭಟನೆಯ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ (Central Education Minister Dharmendra Pradhan Resigned) ಶನಿವಾರ (ಜುಲೈ 25) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ.

ರಾಜೀನಾಮೆಗೆ ‘ಸಿಪಿಜಿ’ ಶರತ್ತು:

ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ಸತತವಾಗಿ ನಡೆಯುತ್ತಿದ್ದ ಪ್ರತಿಭಟನೆಯ ಪ್ರಮುಖ ಬೇಡಿಕೆಯೇ ಶಿಕ್ಷಣ ಸಚಿವರ ರಾಜೀನಾಮೆಯಾಗಿತ್ತು. ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಸಿಜೆಪಿ ನಾಯಕರ ನಡುವಿನ ಮೂರನೇ ಹಂತದ ಮಾತುಕತೆಗೆ ಕೆಲವೇ ಗಂಟೆಗಳ ಮೊದಲು ಪ್ರಧಾನ್‌ ಅವರು ರಾಜೀನಾಮೆ ಘೋಷಿಸಿದರು.

ಧರ್ಮೇಂದ್ರ ಪ್ರಧಾನ್‌ ಅವರ ಹೇಳಿಕೆ:

ತಮ್ಮ ‘X’ (ಟ್ವಿಟರ್) ಖಾತೆಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಅವರು, “ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ. ದೇಶದ ಯುವಜನರ ಭಾವನೆಗಳು, ಆಶೋತ್ತರಗಳು ಹಾಗೂ ನ್ಯಾಯಯುತ ನಿರೀಕ್ಷೆಗಳಿಗೆ ನಾನು ಗೌರವ ನೀಡುತ್ತೇನೆ. ಯುವ ಪೀಳಿಗೆಯ ಕನಸುಗಳನ್ನು ನನಸು ಮಾಡುವುದು ನಮ್ಮ ರಾಜಕೀಯ ಮತ್ತು ಸಾಮಾಜಿಕ ಜೀವನದ ನೈತಿಕ ಸಂಕಲ್ಪವಾಗಿದೆ. ನಿಕಟಪೂರ್ವ ನಾಯಕತ್ವ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ವಿದ್ಯಾರ್ಥಿಗಳಿಂದ ಸಂಭ್ರಮಾಚರಣೆ:

ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆ ಸುದ್ದಿ ತಿಳಿಯುತ್ತಿದ್ದಂತೆಯೇ ಜಂತರ್ ಮಂತರ್‌ನಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರು “ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ” ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. CJP ಸ್ಥಾಪಕ ಅಭಿನೀತ್ ಡಿಪ್ಕೆ ಮಾತನಾಡಿ, “ಜನರ ಹಾಗೂ ಯುವಜನರ ಐಕ್ಯಮತ್ಯದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ” ಎಂದು ತಿಳಿಸಿದರು.

Exit mobile version