ದಿಲ್ಲಿಯಲ್ಲಿ ‘ಕಾಕ್ರೋಚ್​’ ದಂಗೆ : ಸಂಸದ್​ ಚಲೋ ಪ್ರತಿಭಟನೆ – 50ಕ್ಕೂ ಅಧಿಕ ಪೊಲೀಸರಿಗೆ ಗಾಯ

ನವದೆಹಲಿ : ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಡಿ ಈಗ ರಾಜಧಾನಿ ದೆಹಲಿಯಲ್ಲಿ ಭಾರಿ ಪ್ರತಿಭಟನೆಯ ರೂಪ ಪಡೆದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ತರಬೇಕೆಂದು ಒತ್ತಾಯಿಸಿ ಸೋಮವಾರ ಹಮ್ಮಿಕೊಂಡಿದ್ದ 'ಸಂಸದ್ ಚಲೋ' ಮೆರವಣಿಗೆಯು ಕೊನೆಗೆ ಹಿಂಸಾತ್ಮಕ ಸಂಘರ್ಷಕ್ಕೆ ಸಾಕ್ಷಿಯಾಯಿತು.

ನವದೆಹಲಿ : ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಡಿ ಈಗ ರಾಜಧಾನಿ ದೆಹಲಿಯಲ್ಲಿ ಭಾರಿ ಪ್ರತಿಭಟನೆಯ ರೂಪ ಪಡೆದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ತರಬೇಕೆಂದು ಒತ್ತಾಯಿಸಿ ಸೋಮವಾರ ಹಮ್ಮಿಕೊಂಡಿದ್ದ ‘ಸಂಸದ್ ಚಲೋ’ ಮೆರವಣಿಗೆಯು ಕೊನೆಗೆ ಹಿಂಸಾತ್ಮಕ ಸಂಘರ್ಷಕ್ಕೆ ಸಾಕ್ಷಿಯಾಯಿತು.

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಯುವಜನರು ಮತ್ತು ಮಹಿಳೆಯರು ಪಾಲ್ಗೊಂಡಿದ್ದರು.

ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಹೆಜ್ಜೆ ಹಾಕಿದ ಯುವಪಡೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ಈ ರ್ಯಾಲಿಗೆ ಅನುಮತಿ ನಿರಾಕರಿಸಿದ್ದರೂ, ಆಕ್ರೋಶಿತ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನಡೆದರು.

ಈ ವೇಳೆ ಜಂತರ್ ಮಂತರ್ ಮತ್ತು ಶಾಸ್ತ್ರೀ ಭವನದ ಬಳಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ಘರ್ಷಣೆ ಸಂಭವಿಸಿತು. ಜನಸಂದಣಿಯನ್ನು ಚದುರಿಸಲು ಭದ್ರತಾ ಸಿಬ್ಬಂದಿ ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗಿಸಿದರು. ಪ್ರತಿಯಾಗಿ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಐವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಹಲವು ವಿದ್ಯಾರ್ಥಿಗಳಿಗೂ ಗಾಯಗಳಾಗಿದ್ದು, ನೂರಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಜನ್‌ಪಥ್ ರಸ್ತೆಯ ಕೆಲವು ಅಂಗಡಿಗಳು ಮತ್ತು ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ.

ಭದ್ರತೆಯ ದೃಷ್ಟಿಯಿಂದ ರಾಜೀವ್ ಚೌಕ್, ಜನಪಥ್ ಸೇರಿದಂತೆ ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು ಹಾಗೂ ದೆಹಲಿಯ ಹಲವೆಡೆ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು. ಇಷ್ಟೆಲ್ಲಾ ಸವಾಲುಗಳ ನಡುವೆಯೂ, ಬೇಡಿಕೆಗಳು ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಸಿವೆ.

ಇತ್ತ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಪ್ರತಿಭಟನಾಕಾರರ ನಿಯೋಗವನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದ್ದು, ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Cockroach protest in Delhi Sansad Chalo march – Over 50 police personnel injured

Exit mobile version