Kerala Rain Alert : ಕಾಸರಗೋಡಲ್ಲಿ ಬಾರೀ ಮಳೆ, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಹವಾಮಾನ ಇಲಾಖೆ ‘ರೆಡ್ ಅಲರ್ಟ್’ (Red Alert) ಘೋಷಿಸಿದ್ದು, ಕೇರಳದ ಕಾಸರಗೋಡು, ಕಣ್ಣೂರು ಮತ್ತು ಕೋಝಿಕ್ಕೋಡ್ ಜಿಲ್ಲೆಗಳ ಎಲ್ಲಾ ಶಾಲೆ, ಕಾಲೇಜುಗಳಿಗೆ ಜೂನ್ 09ರ ಮಂಗಳವಾರದಂದು ಅಧಿಕೃತ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ತಿರುವನಂತಪುರಂ: ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದ್ದು, ದೇವರನಾಡು ಕೇರಳದಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಬಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ (Red Alert) ಘೋಷಿಸಿದ್ದು, ಕೇರಳದ ಕಾಸರಗೋಡು, ಕಣ್ಣೂರು ಮತ್ತು ಕೋಝಿಕ್ಕೋಡ್ ಜಿಲ್ಲೆಗಳ ಎಲ್ಲಾ ಶಾಲೆ, ಕಾಲೇಜುಗಳಿಗೆ ಜೂನ್ 09ರ ಮಂಗಳವಾರದಂದು ಅಧಿಕೃತ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಹೊಂದಿಕೊಂಡಂತಿರುವ ಕಾಸರಗೋಡು ಭಾಗದಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ಗಡಿ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ಪ್ರೊಫೆಷನಲ್ ಕಾಲೇಜುಗಳು ಸೇರಿದಂತೆ ಎಲ್ಲಾ ಪದವಿ ಕಾಲೇಜುಗಳು, ಅಂಗನವಾಡಿಗಳು, ಮದರಸಾಗಳು ಮತ್ತು ಖಾಸಗಿ ಟ್ಯೂಷನ್ ಸೆಂಟರ್‌ಗಳು, ಕೇಂದ್ರೀಯ ವಿದ್ಯಾಲಯಗಳು, ಸಿಬಿಎಸ್‌ಇ (CBSE) ಮತ್ತು ಐಸಿಎಸ್‌ಇ (ICSE) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Also Read : ವರುಣನ ಅಬ್ಬರ: ಬಿರುಗಾಳಿ ಸಹಿತ ಗುಡುಗು ಮಳೆ ಸಾಧ್ಯತೆ! 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರಾವಳಿ ಗಡಿಯಲ್ಲಿ ರೆಡ್ ಅಲರ್ಟ್ ಭೀತಿ
ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ 20 ಸೆಂಟಿಮೀಟರ್‌ಗಿಂತಲೂ ಅಧಿಕ ಪ್ರಮಾಣದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ತಗ್ಗು ಪ್ರದೇಶಗಳು ಈಗಾಗಲೇ ಜಲಾವೃತಗೊಂಡಿದ್ದು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟವೂ ಜೋರಾಗಿರುವುದರಿಂದ ಮರಗಳು ಧರೆಗುರುಳುವ ಸಂಭವವಿದೆ.
ಸಾರ್ವಜನಿಕರು ಮತ್ತು ಪ್ರವಾಸಿಗರು ಜಲಪಾತಗಳು, ನದಿ ತೀರ ಹಾಗೂ ಕಡಲತೀರಗಳಿಗೆ ಭೇಟಿ ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಕಂಟ್ರೋಲ್ ರೂಮ್‌ಗಳನ್ನು ತೆರೆದಿದ್ದು, ಸಾರ್ವಜನಿಕರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.
Kerala Rain Alert School College Holiday Declared Red Alert



