ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿ ಜಿಲ್ಲೆಗಳಿಗೆ ಕಾದಿದೆ ಮಳೆ
Karnataka Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹವಾಮಾನದ ಮೇಲೆ ಇದು ಪರಿಣಾಮ ಬೀರಿದೆ. ಇಂದಿನಿಂದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದ್ದು ನಾಳೆಯಿಂದ ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಲಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರತ ಕುಸಿತವಾಗಿದೆ. ಸೈಕ್ಲೋನಿಕ್ ಮಾರುತಗಳು ಸಮುದ್ರ ಮಟ್ಟದಿಂದ 7.6 ಕಿಲೋಮೀಟರ್ ಎತ್ತರದವರೆಗೆ ವ್ಯಾಪಿಸಿದೆ. ಆಗ್ನೇಯ ಅರಬ್ಬಿ ಸಮುದ್ರ ಮತ್ತು ದಕ್ಷಿಣ ಕೇರಳ ಭಾಗದ ಕರಾವಳಿ ಪ್ರದೇಶಗಳಲ್ಲಿ ಸೈಕ್ಲೋನಿಕ್ ಸುಳಿಗಾಳಿ ಮುಂದುವರಿಯಲಿದೆ.
ಇದನ್ನೂ ಓದಿ: Research: ಭೂಮಿಯ ಸುತ್ತ ಸುತ್ತುತ್ತಿದೆ ಮತ್ತೊಂದು ಚಂದ್ರ : ಖಗೋಳಶಾಸ್ತ್ರಜ್ಞರ ಅನ್ವೇಷಣೆಯಲ್ಲಿ ಬಯಲಾಯ್ತು ಹೊಸ ಅಂಶ
ಮಳೆಯ ನಡುವೆಯೂ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾದರೆ ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರಿಯಲಿದೆ ಎನ್ನಲಾಗಿದೆ.



