ಒಡಿಶಾದಲ್ಲಿ ವಿಮಾನ ಅಪಘಾತ: 8 ಮಂದಿಗೆ ಗಾಯ, ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು
Odisha plane crash: ರೂರ್ಕೆಲಾ: ಒಡಿಶಾದ ರೂರ್ಕೆಲಾ ವಿಮಾನ ನಿಲ್ದಾಣದ ಸಮೀಪವಿರುವ ಜಗದಾ ಬ್ಲಾಕ್ ಬಳಿ ಶನಿವಾರ 9 ಆಸನಗಳ ಸಣ್ಣ ವಿಮಾನವೊಂದು ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಸೇರಿದಂತೆ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ:
‘ಇಂಡಿಯಾ ಒನ್ ಏರ್’ (IndiaOne Air) ಸಂಸ್ಥೆಗೆ ಸೇರಿದ ಚಾರ್ಲಿ-208 ಮಾದರಿಯ ಈ ಪುಟ್ಟ ವಿಮಾನವು ರೂರ್ಕೆಲಾದಿಂದ ಭುವನೇಶ್ವರಕ್ಕೆ ತೆರಳಲು ಸಿದ್ಧವಾಗಿತ್ತು. ರನ್ವೇಯಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಿಮಾನವು ಏರ್ಸ್ಟ್ರಿಪ್ ಸಮೀಪವೇ ಪತನಗೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಪ್ರಯಾಣಿಕರ ಸ್ಥಿತಿ:
ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಆರು ಮಂದಿ ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ಗಳಿದ್ದರು. ಪತನದ ರಭಸಕ್ಕೆ ವಿಮಾನದಲ್ಲಿದ್ದ ಎಲ್ಲರಿಗೂ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಯಶ್ ಟಾಕ್ಸಿಕ್ ಟೀಸರ್ಗೆ ಕಾನೂನು ಸಂಕಷ್ಟ: ಸೆನ್ಸಾರ್ ಮಂಡಳಿಗೆ ದೂರು ನೀಡಿದ ವಕೀಲ!
ಘಟನಾ ಸ್ಥಳಕ್ಕೆ ವಿಮಾನಯಾನ ಇಲಾಖೆಯ ಅಧಿಕಾರಿಗಳು ಧಾವಿಸಿದ್ದು, ವಿಮಾನ ಪತನಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.



