ಒಡಿಶಾ: ಕಾರಿನಲ್ಲೇ 9ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ

ಒಡಿಶಾ : ಗಣೇಶ ವಿಸರ್ಜನೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಕಾರಿನಲ್ಲೇ 9ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ (Odisha Girl Rape) ಎಸಗಿರುವ ಘಟನೆ ಒಡಿಶಾದ ಕಂಧಮಲ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿಯ ಗಣೇಶ ಪೂಜೆಯನ್ನು ಮುಗಿಸಿಕೊಂಡು ಅಪರಿಚಿತ ವ್ಯಕ್ತಿಯ ಬಳಿಯಲ್ಲಿ ಮನೆಗೆ ತೆರಳಲು ಲಿಫ್ಟ್‌ ಕೇಳಿದ್ದಾಳೆ. ಆದರೆ ಅಪರಿಚಿತ ವ್ಯಕ್ತಿ ಬಾಲಕಿಯ ಮೇಲೆ ಕಾರಿನಲ್ಲಿಯೇ ಅತ್ಯಾಚಾರ ಎಸಗಿದ್ದಾನೆ.

ಪೊಲೀಸರ ಪ್ರಕಾರ, ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಭೇಟಿ ನೀಡಿ ನಂತರ ಗಣೇಶ ಪೂಜೆಯ ನಿಮಜ್ಜನ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋದ ನಂತರ ಈ ಘಟನೆ ನಡೆದಿದೆ.

ಇದನ್ನೂ ಓದಿ: ಯೆಮನ್‌ ನರ್ಸ್‌ ನಿಮಿಷಾ ಪ್ರಿಯಾಗೆ ಜುಲೈ 16ರಂದು ಗಲ್ಲು ಶಿಕ್ಷೆ : ಏನಿದು ಪ್ರಕರಣ?

ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ (Odisha Girl Rape) , ಅತ್ಯಾಚಾರ ಎಸಗಿದ ವ್ಯಕ್ತಿಯಿಂದ ಲಿಫ್ಟ್‌ ಪಡೆದಿದ್ದಾಳೆ ಅನ್ನೋದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಈ ಕುರಿತು ದರಿಂಗ್‌ಬಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ಅತ್ಯಾಚಾರ ಎಸಗಿರುವ ವ್ಯಕ್ತಿ ವಿವಾಹಿತ ಅನ್ನೋದು ತಿಳಿದು ಬಂದಿದೆ. ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಡುಪಿ: ಫೇಸ್ ಬುಕ್‌ ಜಾಹಿರಾತು ನಂಬಿ 3 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಕಂಧಮಾಲ್‌ ಎಸ್ಪಿ ಹರೀಶ್‌ ಬಿಸಿ ಅವರು ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಕೂಡಲೇ ಆರೋಪಿಯನ್ನು ಬಂಧಿಸುವ ಭರವಸೆಯನ್ನು ನೀಡಿದ್ದಾರೆ.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories