ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ವಿದೇಶಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಪ್ರಧಾನಿ ಮೋದಿ ಇದೀಗ ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇಥಿಯೋಪಿಯಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಈ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇಥಿಯೋಪಿಯಾದ ಮಹಾನ್ ಗೌರವ್ ನಿಶಾನ್ ಪಡೆದ ಮೊಟ್ಟ ಮೊದಲ ವಿದೇಶಿ ನಾಯಕ ಎಂಬ ಹೆಗ್ಗಳಿಕೆ ಇವರದ್ದಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಶ್ವದ ಅತ್ಯಂತ ಪುರಾತನ ನಾಗರಿಕತೆಗಳಲ್ಲಿ ಒಂದರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಕ್ಕೆ ಸಂತಸವಿದೆ. ಇದು ಇಡೀ ಭಾರತಕ್ಕೆ ಅತ್ಯಂತ ಹೆಮ್ಮೆಯ ಕ್ಷಣ. ನನ್ನ ಸ್ನೇಹಿತ ಹಾಗೂ ಪ್ರಧಾನಿ ಅಬಿ ಅಹ್ಮದ್ ಅಲಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಜಭವನಕ್ಕೆ ಲೋಕಭವನವೆಂದು ಮರುನಾಮಕರಣ : ಕೇಂದ್ರದ ನಡೆಗೆ ರಾಜ್ಯ ಸರ್ಕಾರದಿಂದ ಆಕ್ಷೇಪ
ನಾವು ಇಥಿಯೋಪಿಯಾದ ರಕ್ಷಣೆಗೆ ಬದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜಾಗತಿಕ ಒಗ್ಗಟ್ಟಿನ ಬಲ ಪ್ರದರ್ಶಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ತ್ರಿರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಿ ಮೋದಿ ಜೋರ್ಡಾನ್ನಿಂದ ಆಡಿಸ್ ಅಬಾಬಾಗೆ ಆಗಮಿಸಿದ್ದಾರೆ .



