ಯುವಶಕ್ತಿಯನ್ನು ಸೆಳೆಯಲು ಪ್ರಧಾನಿ ಮೋದಿ ಮಾಸ್ಟರ್​ ಪ್ಲಾನ್​!

ದೇಶದ ಯುವ ಸಮುದಾಯದೊಂದಿಗೆ ನಿಕಟ ಹಾಗೂ ನಿರಂತರ ಸಂಪರ್ಕವನ್ನು ಹೊಂದಲು ಸಾಮಾಜಿಕ ಮಾಧ್ಯಮಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದ್ದಾರೆ .

ನವದೆಹಲಿ: ದೇಶದ ಯುವ ಸಮುದಾಯದೊಂದಿಗೆ ನಿಕಟ ಹಾಗೂ ನಿರಂತರ ಸಂಪರ್ಕವನ್ನು ಹೊಂದಲು ಸಾಮಾಜಿಕ ಮಾಧ್ಯಮಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದ್ದಾರೆ . ದೆಹಲಿಯಲ್ಲಿ ನಡೆದ ಪ್ರಮುಖ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿಯವರು ಎಲ್ಲಾ ಕೇಂದ್ರ ಸಚಿವರಿಗೆ ಮಹತ್ವದ ನಿರ್ದೇಶನವನ್ನು ನೀಡಿದ್ದಾರೆ .

ದೇಶಾದ್ಯಂತ ನೀಟ್ ಪರೀಕ್ಷೆಯ ವೈಫಲ್ಯ ಹಾಗೂ ಅಕ್ರಮಗಳ ವಿರುದ್ಧ ಯುವಕರು ತೀವ್ರ ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರಿಂದ ಇಂತಹದೊಂದು ಸೂಚನೆ ಹೊರಬಿದ್ದಿರುವುದು ರಾಜಕೀಯ ವಲಯದಲ್ಲಿ ತೀವ್ರ ಗಮನ ಸೆಳೆದಿದೆ . ಸಭೆಯಲ್ಲಿ ಸಚಿವರ ಕಾರ್ಯವೈಖರಿಯನ್ನು ಪರಾಮರ್ಶಿಸಿದ ಪ್ರಧಾನಿಯವರು, “ನಿಮ್ಮಲ್ಲಿ ಎಷ್ಟು ಜನ ಇನ್‌ಸ್ಟಾಗ್ರಾಮ್‌ನಲ್ಲಿ ಸಕ್ರಿಯವಾಗಿದ್ದೀರಿ ಮತ್ತು ನಿಯಮಿತವಾಗಿ ರೀಲ್ಸ್‌ಗಳನ್ನು ಮಾಡುತ್ತೀರಿ?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ .

ಕೇವಲ ಸಚಿವಾಲಯದ ಅಧಿಕೃತ ಕೆಲಸಗಳ ಪ್ರಚಾರಕ್ಕೆ ಮಾತ್ರ ಸೀಮಿತವಾಗದೆ, ಯುವ ಸಮುದಾಯಕ್ಕೆ ಹತ್ತಿರವಾಗುವಂತಹ ಆಕರ್ಷಕ ವಿಡಿಯೋಗಳನ್ನು ಪ್ರಕಟಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ ಯುವಕರನ್ನು ತಲುಪಲು ಇನ್‌ಸ್ಟಾಗ್ರಾಮ್ ರೀಲ್ಸ್ ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದ್ದು, ಅದನ್ನು ಸಚಿವರು ಬಳಸಿಕೊಳ್ಳಬೇಕು ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ .

ಇದೇ ವೇಳೆ, ದೆಹಲಿಯಲ್ಲಿ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಬಲಪ್ರಯೋಗದ ಕುರಿತಾದ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆಗೆ ಸ್ವೀಕರಿಸಿರುವ ಸುಪ್ರೀಂಕೋರ್ಟ್, ಜುಲೈ 27ರಂದು ತುರ್ತು ವಿಚಾರಣೆ ನಡೆಸುವುದಾಗಿ ಪ್ರಕಟಿಸಿದೆ .

ಸಂಸತ್ ಚಲೋ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಕುರಿತು ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠವು ಈ ನಿರ್ಧಾರ ಕೈಗೊಂಡಿದೆ . ಮತ್ತೊಂದೆಡೆ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಸಿಜೆಪಿ ವಕ್ತಾರರೊಂದಿಗೆ ಸುದೀರ್ಘ ಮಾತುಕತೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿದ್ದಾರೆ .

Exit mobile version