ಜಾತ್ರೆ ಮುಗಿಸಿ ಬರುತ್ತಿದ್ದ ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾ*ಚಾರ : ಆರೋಪಿಗಳ ಬಂಧನ
Rape case: ಇಬ್ಬರು ಬುಡಕಟ್ಟು ಸಮಾಜದ ಬಾಲಕಿಯತು ತಮ್ಮ ಸ್ನೇಹಿತರೊಂದಿಗೆ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಎದುರಿಗೆ ಬಂದ ಐವರು ಕಾಮುಕರು ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯು ಓಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ಸಂಭವಿಸಿದೆ.
ಬುಧವಾರ ಈ ಘಟನೆ ಸಂಭವಿಸಿದ್ದು ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ರಸ್ಗೋವಿಂದ್ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
13 ಮತ್ತು 14 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯರು ಇಬ್ಬರು ಹುಡುಗರೊಂದಿಗೆ ಜಾತ್ರೆ ನೋಡಲು ಹತ್ತಿರದ ಹಳ್ಳಿಗೆ ತೆರಳಿದ್ದರು ಎನ್ನಲಾಗಿದೆ. ಜಾತ್ರೆ ನೋಡಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಅವರ ಬೈಕ್ನ್ನು ಅಡ್ಡಗಟ್ಟಿದ ಕಾಮುಕರ ಗುಂಪು ಇಬ್ಬರು ಹುಡುಗರ ಮೇಲೆ ಹಲ್ಲೆ ನಡೆಸಿ ಬಳಿಕ ಬಾಲಕಿಯರನ್ನು ಎಳೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. 8 ಹಾಗೂ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಐವರು ಅತ್ಯಾಚಾರ ಎಸಗಿದ್ದಾರೆ.
Also Read: ಪುತ್ರಿಯ ಮೇಲೆ ಅತ್ಯಾ*ಚಾರ ನಡೆಯುತ್ತಿರುವುದನ್ನು ಕಣ್ಣಾರೆ ಕಂಡ ತಂದೆ ಮಾಡಿದ್ದೇನು ನೋಡಿ
ಐವರು ಆರೋಪಿಗಳ ಪೈಕಿ ಮೂವರನ್ನು ಈಗಾಗಲೇ ಬಂಧಿಸಲಾಗಿದ್ದು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇನ್ನು ಈ ಪ್ರಕರಣವು ರಾಜ್ಯದಲ್ಲಿ ರಾಜಕೀಯ ಕೆಸೆರೆರಚಾಟಕ್ಕೂ ವೇದಿಕೆ ಕಲ್ಪಿಸಿದ್ದು ಕಳೆದ 16 ತಿಂಗಳಲ್ಲಿ ಒಡಿಶಾದಲ್ಲಿ 5 ಸಾವಿರಕ್ಕೂ ಅಧಿಕ ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ರಾಜ್ಯದ ಮಹಿಳೆಯರು ಅಪಾಯದಲ್ಲಿದ್ದಾರೆ ಎಂದು ಬಿಜೆಪಿ ವಕ್ತಾರ ಲೆನಿನ್ ಮೊಹಂತಿ ಗುಡುಗಿದ್ದಾರೆ.



