ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು ಕ್ರಮ : 10 ವರ್ಷ ಜೈಲು, ಬರೋಬ್ಬರಿ 10 ಕೋಟಿ ದಂಡ

ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನನ್ನು ಜಾರಿಗೆ ತರಲು ಮುಂದಾಗಿದೆ ಪರೀಕ್ಷಾ ಅವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು, ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆಗಟ್ಟುವಿಕೆ) ಕಾಯ್ದೆ-2024ಕ್ಕೆ ಮಹತ್ವದ ತಿದ್ದುಪಡಿ ತರಲು ಅನುಮೋದನೆ ನೀಡಿದೆ .

ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನನ್ನು ಜಾರಿಗೆ ತರಲು ಮುಂದಾಗಿದೆ ಪರೀಕ್ಷಾ ಅವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು, ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆಗಟ್ಟುವಿಕೆ) ಕಾಯ್ದೆ-2024ಕ್ಕೆ ಮಹತ್ವದ ತಿದ್ದುಪಡಿ ತರಲು ಅನುಮೋದನೆ ನೀಡಿದೆ . ಈ ಪ್ರಸ್ತಾವಿತ ಹೊಸ ಮಸೂದೆಯನ್ನು ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ .

ಹೊಸ ಮಸೂದೆಯ ಅನ್ವಯ, ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳಲ್ಲಿ ಭಾಗಿಯಾಗುವ ಸವಾರಿಗೆ ಹಾಗೂ ಪ್ರಮುಖ ರೂವಾರಿಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಬರೋಬ್ಬರಿ 10 ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ . ಸಂಘಟಿತ ಅಪರಾಧದ ಪ್ರಕರಣಗಳಲ್ಲಿ ಕನಿಷ್ಠ 5 ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ ಕನಿಷ್ಠ 1 ಕೋಟಿ ರೂಪಾಯಿ ದಂಡ ಕಡ್ಡಾಯಗೊಳಿಸಲಾಗಿದೆ .

ವಿಶೇಷವೆಂದರೆ, ಪರೀಕ್ಷಾ ಸೋರಿಕೆ ವಿಷಯ ತಿಳಿದಿದ್ದರೂ ಅದನ್ನು ಮುಚ್ಚಿಡುವ ಸಂಸ್ಥೆ ಅಥವಾ ವ್ಯಕ್ತಿಗಳಿಗೂ ₹1 ಕೋಟಿವರೆಗೆ ದಂಡ ವಿಧಿಸುವ ಕಠಿಣ ನಿಯಮವನ್ನು ಸೇರಿಸಲಾಗಿದೆ . ಈ ಹಗರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಶೀಘ್ರಗತಿ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಮತ್ತು ಕೇವಲ ಮೂರು ತಿಂಗಳ ಒಳಗಾಗಿ ತೀರ್ಪು ಪ್ರಕಟವಾಗಲಿದೆ .

ಪ್ರಸ್ತುತ ಚಾಲ್ತಿಯಲ್ಲಿರುವ ಕಾನೂನಿನಲ್ಲಿ 3 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕೇವಲ 10 ಲಕ್ಷ ರೂಪಾಯಿಗಳವರೆಗೆ ಮಾತ್ರ ದಂಡ ವಿಧಿಸಲು ಅವಕಾಶವಿತ್ತು . ಆದರೆ ಪರೀಕ್ಷಾ ಮಾಫಿಯಾಗೆ ನಡುಕ ಹುಟ್ಟಿಸಲು ಈ ಶಿಕ್ಷೆಯ ಪ್ರಮಾಣವನ್ನು ಭಾರೀ ಮಟ್ಟದಲ್ಲಿ ಹೆಚ್ಚಿಸಲಾಗಿದೆ.

ಇನ್ನೊಂದೆಡೆ, ನೀಟ್ (NEET) ಪರೀಕ್ಷಾ ಅಕ್ರಮದ ವಿವಾದದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ಸಂಪೂರ್ಣವಾಗಿ ಶುದ್ಧೀಕರಿಸುವ ಕಾರ್ಯ ಆರಂಭವಾಗಿದೆ . ಪರೀಕ್ಷಾ ಸೋರಿಕೆಯಲ್ಲಿ ಶಾಮೀಲಾದ ಆರೋಪದ ಹಿನ್ನೆಲೆಯಲ್ಲಿ ಇಲಾಖೆಯ 47 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ .

ಇವರ ವಿರುದ್ಧ ಇಲಾಖಾ ಕ್ರಮದ ಜೊತೆಗೆ ಕಠಿಣ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲು ನಿರ್ಧರಿಸಲಾಗಿದೆ . ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯಕ್ಕೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಈ ಕಠಿಣ ಕ್ರಮ ಜರುಗಿಸಲಾಗಿದೆ .

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »