ಮೇ ತಿಂಗಳಲ್ಲಿ ಬಿಸಿಲು ಇನ್ನೂ ಹೆಚ್ಚಾಗುತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ.”
ಪರಿಸ್ಥಿತಿ ಕೊಂಚ ಹತೋಟಿಗೆ ಬಂದಿದೆ ಎನ್ನುವಾಗಲೇ ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ತಾಪಮಾನದ ಕುರಿತಂತೆ ಬಿಗ್ ಅಪ್ಡೇಟ್ ನೀಡಿದೆ.

ದೇಶಾದ್ಯಂತ ಬಿಸಿಲಿನ ಅಬ್ಬರ ಮಿತಿಮೀರಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಪರಿಸ್ಥಿತಿ ಕೊಂಚ ಹತೋಟಿಗೆ ಬಂದಿದೆ ಎನ್ನುವಾಗಲೇ ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ತಾಪಮಾನದ ಕುರಿತಂತೆ ಬಿಗ್ ಅಪ್ಡೇಟ್ ನೀಡಿದೆ. ದೇಶದ ಹಲವು ರಾಜ್ಯಗಳಲ್ಲಿ ಮೇ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗಲಿದ್ದು, ಬಿಸಿಗಾಳಿಯ ಪ್ರಭಾವ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. .
ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮೋಹಾಪಾತ್ರ ನೀಡಿರುವ ಮಾಹಿತಿಯ ಪ್ರಕಾರ, ಪೂರ್ವ ಕರಾವಳಿಯ ರಾಜ್ಯಗಳು , ಗುಜರಾತ್ ಹಾಗೂ ಮಹಾರಾಷ್ಟ್ರ, ಹಿಮಾಲಯದ ತಪ್ಪಲಿನ ಪ್ರದೇಶಗಳಲ್ಲಿ ತಾಪಮಾನ ಅತ್ಯಧಿಕ ಪ್ರಮಾಣದಲ್ಲಿ ಇರಲಿದೆ ಎನ್ನಲಾಗಿದೆ. ಅಲ್ಲದೇ ಈ ಮೇ ತಿಂಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ಕನಿಷ್ಠ ಉಷ್ಣಾಂಶವೂ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎನ್ನಲಾಗಿದೆ.
ಬಿಸಿಲ ನಡುವೆಯೂ ಒಂದು ಆಶಾದಾಯಕ ಸುದ್ದಿ ಎಂದರೆ, ಮೇ ತಿಂಗಳಿನಲ್ಲಿ ದೇಶದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನೈಋತ್ಯ ಮುಂಗಾರು ಮಳೆಯು ಮೇ 14 ಅಥವಾ 16ರ ಸುಮಾರಿಗೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ.



