Afghanistan blast : ಕಾಬೂಲ್‌ನ ತಾಲಿಬಾನ್‌ ವಿದೇಶಾಂಗ ಸಚಿವಾಲಯದಲ್ಲಿ ಭಾರೀ ಸ್ಫೋಟ : 3 ಸಾವು

ಕಾಬೂಲ್ : Afghanistan blast : ತಾಲಿಬಾನ್‌ನ ವಿದೇಶಾಂಗ ಸಚಿವಾಲಯದ ಪ್ರವೇಶದ್ವಾರದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಕನಿಷ್ಠ ಮೂರು ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಈ ಕುರಿತು ಅಪ್ಘಾನಿಸ್ಥಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಘಟನಾ ಸ್ಥಳದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ವಿದೇಶಾಂಗ ಸಚಿವಾಲಯದ ಗೇಟ್ ಬಳಿ ಭಾರೀ ಸ್ಫೋಟ ಸಂಭವಿಸಿದಾಗ ತಾಲಿಬಾನ್ ಮತ್ತು ಚೀನಾದ ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿತ್ತು ಎಂದು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಮು ಟಿವಿ ವರದಿ ಮಾಡಿದೆ.

ಇದನ್ನೂ ಓದಿ : ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್ ಪೋರ್ಟ್ ಪಟ್ಟಿ 2023 : ಭಾರತಕ್ಕೆ ಎಷ್ಟನೇ ಸ್ಥಾನ ?

ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್‌ ಕುಸಿತ: ಇಂಜಿನಿಯರ್‌ ಸಾವು

ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ತಾತ್ಕಾಲಿಕ ಲಿಫ್ಟ್‌ ಅಪಘಾತಕ್ಕೀಡಾಗಿ ಖಾಸಗಿ ಕಂಪನಿಯೊಂದರ ಇಂಜಿನಿಯರ್‌ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಫಿರೋಜಾಬಾದ್ ಜಿಲ್ಲೆಯ ರಿತಿಕ್ ರಾಥೋಡ್ (28 ವರ್ಷ) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : Mangalore 10 People Arrested : ವೈದ್ಯರು, ವಿದ್ಯಾರ್ಥಿಗಳಿಂದ ಡ್ರಗ್ಸ್ ದಂಧೆ : 10 ಮಂದಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಅನ್ನು ತೆಗೆದುಹಾಕುವ ಪ್ರಕ್ರಿಯೆ ನಡೆಯುತ್ತಿರುವಾಗ ತಾತ್ಕಾಲಿಕ ಲಿಫ್ಟ್‌ ಕುಸಿದು ರಿತಿಕ್‌ ರಾಥೋಡ್‌ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ರಾಥೋಡ್‌ ಅವರು ತೀವ್ರವಾಗಿ ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಥೋಡ್‌ ಅವರು ಸಾವನ್ನಪ್ಪಿದರು ಎಂದು ಹೆಚ್ಚುವರಿ ಉಪಪೊಲೀಸ್‌ ಆಯುಕ್ತ ದಿನೇಸ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ. ಈ ಸಂಬಂಧ ಪೊಲೀಸ್‌ ಕಮಿಷನರ್‌ ಲಕ್ಷ್ಮಿ ಸಿಂಗ್‌ ಅವರು ಪ್ರಕರಣದ ಕುರಿತು ಎಫ್‌ ಐಆರ್‌ ದಾಖಲಿಸಬೇಕು. ಮತ್ತು ಇದಕ್ಕೆ ಕಾರಣರಾದವರನ್ನು ಬಂಧಿಸಬೇಕು ಎಂದು ಆದೇಶಿಸಿದರು. ಸದ್ಯ ಗ್ರೇಟರ್‌ ನೋಯ್ಡಾದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಅಧಿಕಾರಿಯೊಬ್ಬರ ಪ್ರಕಾರ, ಸ್ಥಳದಲ್ಲಿ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಲಿಫ್ಟ್‌ ಅನ್ನು ಅಳವಡಿಸಲಾಗಿದೆ. ಮತ್ತು ಅವಧಿ ಪೂರ್ಣಗೊಂಡ ನಂತರ ಅದನ್ನು ತೆಗೆದು ಹಾಕಲಾಗುತ್ತದೆ ಎಂದಿದ್ದಾರೆ. ಇದೀಗ ಅವಧಿ ಪೂರ್ಣಗೊಂಡ ತಾತ್ಕಾಲಿಕ ಲಿಫ್ಟ್‌ ಅನ್ನು ತೆಗೆದುಹಾಕುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದಿದ್ದಾರೆ. ಈ ಹಿಂದೆ ಮುಂಬೈ ನಲ್ಲಿ ಕೂಡ ಇದೇ ರೀತಿಯಾದ ಘಟನೆ ನಡೆದಿತ್ತು. ಲಿಫ್ಟ್‌ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈಗಲೂ ಇದೇ ರೀತಿಯ ಘಟನೆ ಮರುಕಳಿಸಿದ್ದು, ಇಂಜಿನಿಯರ್‌ ಯುವಕ ಸಾವನ್ನಪ್ಪಿದ್ದಾನೆ.

Afghanistan blast: Massive explosion at Taliban’s foreign ministry in Kabul;3 killed

Comments are closed.