ಇರಾಕ್ : ಆಸ್ಪತ್ರೆಯ ಕೊರೊನಾ ವೈರಸ್ ಐಸೊಲೇಷನ್ ವಾರ್ಡ್‌ನಲ್ಲಿ ಬೆಂಕಿಯಲ್ಲಿ ಕಾಣಿಸಿಕೊಂಡು ಕನಿಷ್ಠ 52 ಜನರು ಸಾವನ್ನಪ್ಪಿದ್ದಾರೆ, 67 ಗಂಭೀರವಾಗಿ ಗಾಯಗೊಂಡಿರುವ ಘಟನೆ ಇರಾಕ್ ನಲ್ಲಿ ನಡೆದಿದೆ.
ಇರಾಕ್ ನ ದಕ್ಷಿಣ ನಗರವಾದ ನಾಸಿರಿಯಾದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ನಾಗರಿಕ ರಕ್ಷಣಾ ತಂಡಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಎರಡನೇ ಅತೀ ದೊಡ್ಡ ದುರಂತವಾಗಿದೆ.
ಆಮ್ಲಜನಕ ಸ್ಪೋಟದಿಂದ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಆರೋಗ್ಯ ಪ್ರಾಧಿಕಾರದ ವಕ್ತಾರ ಹೇದರ್ ಅಲ್-ಜಮಿಲಿ ಅವರು ತಿಳಿಸಿದ್ದು, ಹೊರತೆಗೆಯಲಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ, ಉಳಿದಂತೆ ಆಸ್ಪತ್ರೆಯಲ್ಲಿದ್ದ ಹಲವು ರೋಗಿಗಳು ನಾಪತ್ತೆಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಐಸಿಯು ವಾರ್ಡ್ ನಲ್ಲಿ 70 ಹಾಸಿಗೆಗಳಿವೆ. ಆದರೆ ಆಸ್ಪತ್ರೆಯ ಇತರ ಭಾಗಕ್ಕೂ ಬೆಂಕಿ ವ್ಯಾಪಿಸಿರೋ ಹಿನ್ನೆಲೆಯಲ್ಲಿ ಕಟ್ಟಡದಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯೆತೆ ಇದೆ.
ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ, ಆದರೆ ದಟ್ಟವಾದ ಹೊಗೆಯು ಸುಟ್ಟುಹೋದ ಕೆಲವು ವಾರ್ಡ್‌ಗಳಿಗೆ ಪ್ರವೇಶಿಸಲು ಕಷ್ಟವಾಗುತ್ತಿದೆ ಎಂದು ನಾಸಿರಿಯಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಂಚಲಾದ ತುಣುಕಿನಲ್ಲಿ ಆಸ್ಪತ್ರೆಯ ಕಟ್ಟಡಗಳಿಂದ ಹೊಗೆಯ ಬಿಲ್ಲಿಂಗ್ ದಟ್ಟವಾದ ಮೋಡಗಳು ಕಂಡುಬಂದಿವೆ.