Imran Khan Faces Arrest : ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಂಧನ ಭೀತಿ..?

ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಭೀತಿ ಎದುರಿಸುತ್ತಿದ್ದಾರೆ.(Imran Khan Faces Arrest). ಪಾಕಿಸ್ತಾನದಲ್ಲಿ ಖಾನ್ ಪಕ್ಷ PTI ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ನಾಯಕರು ತಮ್ಮ ಕಾರ್ಯಕರ್ತರಿಗೆ ಪ್ರತಿಭಟನೆಗೆ ಸಜ್ಜಾಗುವಂತೆ ಕರೆ ನೀಡಿದ್ದಾರೆ.

ನ್ಯಾಯಾಧೀಶರಿಗೆ ಹಾಗೂ ಉನ್ನತ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ, ಇಸ್ಲಾಮಾಬಾದ್ ಸದ್ದರ್ ಕೋರ್ಟ್ ನ ಮ್ಯಾಜಿಸ್ಟ್ರೇಟ್ ಅಲಿ ಜಾವೇದ್ ದೂರು ನೀಡಿದ್ರು. ಹೀಗಾಗಿ ಇಮ್ರಾನ್ ಖಾನ್​ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಇಮ್ರಾನ್ ಖಾನ್ ಸರ್ಕಾರಿ ಸಂಸ್ಥೆಗಳಿಗೆ ಬೆದರಿಕೆ ಹಾಕುವಂಥ ಮತ್ತು ಪ್ರಚೋದನೆ ನೀಡುವಂತೆ ಭಾಷಣ ಮಾಡಿದ್ರು. ಅಲ್ದೆ, ಕಳೆದ ವಾರ ದೇಶದ್ರೋಹದ ಆರೋಪದ ಮೇಲೆ ಬಂಧಿತನಾಗಿದ್ದ ತನ್ನ ಸಹಾಯಕ ಶಹಬಾಜ್ ಗಿಲ್‌ಗೆ ನೀಡಿದ ಚಿಕಿತ್ಸೆಗೆ ಸಂಬಂಧ ಪೊಲೀಸ್ ಅಧಿಕಾರಿಗಳು, ಮಹಿಳಾ ನ್ಯಾಯಾಧೀಶೆ ಪಾಕಿಸ್ತಾನದ ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಇಂಥ ಹೇಳಿಕೆಗಳನ್ನ ನೀಡಿದ ಬಳಿಕ ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಅವರ ಭಾಷಣಗಳ ನೇರ ಪ್ರಸಾರಕ್ಕೆ  PEMRA(ಪಾಕಿಸ್ತಾನ್ ಎಲೆಕ್ಟ್ರಾನಿಕ್ ಮೀಡಿಯಾ ರೆಗ್ಯುಲೇಟರಿ ಅಥಾರಿಟಿ) ನಿಷೇಧ ಹೇರಿತ್ತು. ಇಮ್ರಾನ್ ಖಾನ್ ತಮ್ಮ ಭಾಷಣದಲ್ಲಿ ಆಧಾರರಹಿತ ಆರೋಪ ಮಾಡ್ತಿದ್ದಾರೆ. ಅಲ್ದೆ ಪಾಕಿಸ್ತಾನದ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ರಾಜ್ಯ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ಮೂಲಕ ದ್ವೇಷಪೂರಿತ ಭಾಷಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಪಿಇಎಂಆರ್‌ಎ ತನ್ನ ನಿರ್ದೇಶನದಲ್ಲಿ ತಿಳಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಗೆ ಇದರಿಂದ ತೊಡಕಾಗಿದೆ. ಇದರಿಂದ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಮಧ್ಯೆ ಇಮ್ರಾನ್ ಖಾನ್ ಬಂಧನಕ್ಕೂ ಮೊದಲೇ ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ದೆ, ಖಾನ್ ವಿರುದ್ಧ ಕೇಸ್ ದಾಖಲಾಗ್ತಿದ್ದಂತೆ ಪಿಟಿಐ ಕಾರ್ಯಕರ್ತರು ಆಕ್ರೋಶ ಹೊರಹಾಕ್ತಿದ್ದಾರೆ. ನಮ್ಮ ನಾಯಕನನ್ನ ಅಪಾಯದಲ್ಲಿದ್ದಾರೆ ಬೀದಿಗಿಳಿದು ಪ್ರತಿಭಟನೆ ನಡೆಸುವಂತೆ ಕರೆ ನೀಡಲಾಗಿದೆ. ಇದು ಪಾಕಿಸ್ತಾನದಲ್ಲಿ ಮತ್ತೊಂದು ರಾಜಕೀಯ ಹೈಡ್ರಾಮಾಗೆ ಸಾಕ್ಷಿಯಾಗುವಂತೆ ಮಾಡಿದೆ.

ಇದನ್ನೂ ಓದಿ : pratap simha : ಟಿಪ್ಪುಗೆ ಹೆದರಲಿಲ್ಲ, ಇನ್ನು ಸಿದ್ದು ಸುಲ್ತಾನನಿಗೆ ಹೆದರುತ್ತೀವಾ : ಪ್ರತಾಪ್​ ಸಿಂಹ ವ್ಯಂಗ್ಯ

ಇದನ್ನೂ ಓದಿ : Virat Kohli Scooter Ride: ಪತ್ನಿಯನ್ನು ಕೂರಿಸಿಕೊಂಡು ಅಜ್ಞಾತ ವೇಷದಲ್ಲಿ ಸ್ಕೂಟರ್ ಓಡಿಸಿದ ವಿರಾಟ್ ಕೊಹ್ಲಿ

imran khan faces arrest pti workers pak govt

Comments are closed.