ಕಾಬೂಲ್ : ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಬಾರೀ ಸ್ಪೋಟ ಸಂಭವಿಸಿದೆ. ಅಮೇರಿಕಾ ಸೇನೆಯನ್ನು ಗುರಿಯಾಗಿ ಇಟ್ಟುಕೊಂಡು ಸ್ಪೋಟ ನಡೆಸಲಾಗಿದೆ ಎನ್ನಲಾಗಿದ್ದು, ಸ್ಪೋಟದಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಾಬೂಲ್ ವಿಮಾನ ನಿಲ್ದಾಣದ ಬಳಿಯ್ಲಲಿ ಇಟಲಿಯ ವಿಮಾನ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ನಂತರದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ ಮಾಡಿದೆ. ವಿಮಾನ ನಿಲ್ದಾಣದ ಗೇಟ್ ಹಾಗೂ ಹೋಟೆಲ್ ಬಳಿಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಎರಡನೇ ಬಾರಿಗೆ ದಾಳಿ ನಡೆಸಿರುವ ಕುರಿತು ಎಎನ್‌ಐ ಖಚಿತ ಪಡಿಸಿದೆ.
ಸ್ಪೋಟದಲ್ಲಿ ಸಾವು, ನೋವು ಎಷ್ಟರ ಮಟ್ಟಿಗೆ ಆಗಿದೆ ಅನ್ನೋದು ಇನ್ನೂ ಖಚಿತವಾಗಿಲ್ಲ. ಘಟನೆಯಲ್ಲಿ ಸುಮಾರು ಹದಿನೆಂಟಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ಆತ್ಮಾಹುತಿ ಸ್ಪೋಟ ತೀವ್ರತೆಯ ಪೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ದಾಳಿಯ ಹಿಂದೆ ಐಸಿಸ್ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ.