School Fire : ಶಾಲೆಗೆ ಬೆಂಕಿ 18 ಮಕ್ಕಳು ಸಜೀವ ದಹನ, 16 ಮಕ್ಕಳು ಗಂಭೀರ

ಬೀಜಿಂಗ್ : ಕೊರೊನಾ ಸೋಂಕು ಹುಟ್ಟಿಗೆ ಕಾರಣವಾಗಿರುವ ಚೀನಾ ದಲ್ಲಿ ಶಾಲೆಯೊಂದರಲ್ಲಿ ಸುಮಾರು 18 ಮಕ್ಕಳು ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ.

ಮಧ್ಯ ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ  ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯಲ್ಲಿ ವಾಸ್ತವ್ಯದಲ್ಲಿದ್ದ 18 ವಿದ್ಯಾರ್ಥಿ ಗಳು ಸಾವನ್ನಪ್ಪಿದ್ದು, 16 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುವ ಸಮಯದಲ್ಲಿ ಶಾಲೆಯಲ್ಲಿ ಸುಮಾರು 34 ವಿದ್ಯಾರ್ಥಿಗಳು ಮಾತ್ರವೇ ಇದ್ದಿದ್ದರು. ಎಲ್ಲಾ ವಿದ್ಯಾರ್ಥಿಗಳು ಸುಮಾರು 7 ವರ್ಷದಿಂದ 16 ವರ್ಷ ವಯಸ್ಸಿನವರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂಧಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ಬೆಂಕಿ ಅವಘಡ ಸಂಭವಿಸಿದೆ ಅನ್ನೋದು ತಿಳಿದುಬಂದಿಲ್ಲ. ಘಟನೆಯ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.

Comments are closed.