ನವದೆಹಲಿ : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಗೆ ಭಾರತ ತತ್ತರಿಸಿ ಹೋಗಿದೆ. ಆದರೆ ಮೇ ತಿಂಗಳು ಇನ್ನಷ್ಟು ಭಯಾನಕ ವಾಗಿರಲಿದೆ ಎಂಬ ಮಾಹಿತಿಯನ್ನು ಅಮೇರಿಕಾ ವಿಜ್ಞಾನಿಗಳು ನೀಡಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ನಿತ್ಯವೂ 3 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಸೋಂಕಿತರು ಹೆಮ್ಮಾರಿ ಕೊರೊನಾಗೆ ತುತ್ತಾಗಿದ್ದಾರೆ. ಆದರೆ ಮೇ ತಿಂಗಳಲ್ಲಿ ಪ್ರತಿನಿತ್ಯ 8 ಲಕ್ಷ ಮಂದಿ ಸೋಂಕಿಗೆ ತುತ್ತಾಗಲಿದ್ದಾರೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಲಿದ್ದು, ದಿನ ನಿತ್ಯ 5 ಸಾವಿರಕ್ಕೂ ಅಧಿಕ ಮಂದಿಯನ್ನು ಕೊರೊನಾ ಸೋಂಕು ಬಲಿ ಪಡೆಯಲಿದೆ.
ಅಮೇರಿಕಾದ ಮಿಚೆಗನ್ ವಿವಿಯ ವಿಜ್ಞಾನಿ ಡಾ. ಭ್ರಮರಾ ಮುಖರ್ಜಿ ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ. ಎಪ್ರೀಲ್ 12 ರಿಂದ ಅಗಸ್ಟ್ 10ರ ವರೆಗೆ ದೇಶದಲ್ಲಿ ಬರೋಬ್ಬರಿ 3.29 ಲಕ್ಷ ಜನರು ಸಾವನ್ನಪ್ಪಲಿ ದ್ದಾರೆ ಅನ್ನೋ ಮಾಹಿತಿಯನ್ನು ನೀಡಿದ್ದಾರೆ. ಒಟ್ಟಿನಲ್ಲಿ ಕೊರೊನಾ ಸೋಂಕು ದಿನೇ ದಿನೇ ಆತಂಕವನ್ನು ತಂದೊಡ್ಡುತ್ತಿದೆ.
Comments are closed.