Nirav Modi: ನೀರವ್ ಮೋದಿ ಮೇಲ್ಮನವಿ ಅರ್ಜಿ ವಜಾ; ಭಾರತಕ್ಕೆ ಹಸ್ತಾಂತರಿಸುವಂತೆ ಬ್ರಿಟನ್ ಕೋರ್ಟ್ ಆದೇಶ

ಬ್ರಿಟನ್ : Nirav Modi: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ (PNB) ಸಾವಿರಾರು ಕೋಟಿ ರೂ. ವಂಚಿಸಿ ದೇಶಬಿಟ್ಟು ಪಲಾಯನ ಮಾಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆಗಳು ದಟ್ಟವಾಗುತ್ತಿವೆ. ಕಾರಣ ಭಾರತಕ್ಕೆ ಹಸ್ತಾಂತರ ಮಾಡುವ ಆದೇಶವನ್ನು ಪ್ರಶ್ನಿಸಿ ನೀರವ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಕೋರ್ಟ್ ನಿರಾಕರಿಸಿದೆ. ಅಲ್ಲದೇ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಆದೇಶ ನೀಡಿದೆ.

ಇದನ್ನೂ ಓದಿ: Kerala Controversy: ವಿವಾದದ ಸುಳಿಯಲ್ಲಿ ದಿ ಕೇರಳ ಸ್ಟೋರಿ: ಕೇರಳವನ್ನು ‘ಉಗ್ರರ ಸ್ವರ್ಗ ಎಂಬಂತೆ ಬಿಂಬಿಸಿದ್ದ ಚಿತ್ರತಂಡದ ವಿರುದ್ಧ ಕೇಸ್

ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಬರೋಬ್ಬರಿ 13,500 ಕೋಟಿ ರೂ.ವಂಚಿಸಿ ವಿದೇಶಕ್ಕೆ ಪಲಾಯನ ಮಾಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಆದೇಶವನ್ನು ಪ್ರಶ್ನಿಸಿ ಬ್ರಿಟನ್ ಹೈಕೋರ್ಟ್‍ಗೆ ಮೊರೆ ಹೋಗಿದ್ದರು. ಮಾನಸಿಕ ಖಿನ್ನತೆ ಸೇರಿದಂತೆ ಹಲವು ಕಾರಣಗಳಿಂದಾಗಿ ಮೇಲ್ಮನವಿ ಸಲ್ಲಿಸಲು ನೀರವ್ ಮೋದಿಗೆ ಅವಕಾಶ ನೀಡಲಾಗಿತ್ತು. ಇಂದು ಅರ್ಜಿಯ ಅಂತಿಮ ವಿಚಾರಣೆ ನಡೆಸಿರುವ ಕೋರ್ಟ್ ನೀರವ್ ಮೋದಿ ಮನವಿಯನ್ನು ತಿರಸ್ಕರಿಸಿದೆ. ಹಾಗೂ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಆದೇಶ ನೀಡಿದೆ.

ಈ ವರ್ಷದ ಆರಂಭದಲ್ಲಿ ನೀರವ್ ಮೋದಿ ಮೇಲ್ಮನವಿ ಅರ್ಜಿ ವಿಚಾರಣೆ ನೇತೃತ್ವ ವಹಿಸಿದ್ದ ಲಾರ್ಡ್ ಜಸ್ಟೀಸ್ ಜೆರೆಮಿ ಸ್ಟುವರ್ಟ್ ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೆ ಅವರು ಈ ತೀರ್ಪನ್ನು ನೀಡಿದ್ದಾರೆ. ಆಗ್ನೇಯ ಲಂಡನ್ ನ ವಿಂಡ್ಸ್‍ವರ್ತ್ ಜೈಲಿನಲ್ಲಿರುವ 51 ವರ್ಷದ ನೀರವ್ ಮೋದಿಗೆ ಕಳೆದ ಫೆಬ್ರವರಿಯಲ್ಲಿ ಹಸ್ತಾಂತರದ ಪರವಾಗಿ ಜಿಲ್ಲಾ ನ್ಯಾಯಾಧೀಶ ಸ್ಯಾಮ್ ಗೂಜಿ ಅವರ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದ್ದರು.

ನೀರವ್ ಮೋದಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಪ್ರಸ್ತಾಪಿಸಿದ ಕಾರಣ ಹಸ್ತಾಂತರ ಆದೇಶ ಪ್ರಶ್ನಿಸಿ ಹೈಕೋರ್ಟ್‍ಗೆ ಮನವಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ಇದೇ ಮಾನದಂಡದ ಮೇಲೆ 14 ದಿನಗಳೊಳಗೆ ನೀರವ್ ಮೋದಿಯು ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ಸುಪ್ರೀಂಕೋರ್ಟ್ ನಲ್ಲೂ ಅರ್ಜಿ ತಿರಸ್ಕ್ಕøತವಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಈ ಪ್ರಕ್ರಿಯೆ ಮುಗಿಯುವ ತನಕ ನೀರವ್ ಮೋದಿ ಜೈಲಿನಲ್ಲೇ ಕಾಲ ಕಳೆಯಬೇಕಿದೆ.

ಇದನ್ನೂ ಓದಿ: LIVE Updates | IND vs ENG : ಟಿ20 ವಿಶ್ವಕಪ್: ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ಗೆ ಹೀಗಿದೆ ಭಾರತದ ಪ್ಲೇಯಿಂಗ್ XI

ಏನಿದು ಪ್ರಕರಣ?
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸುಮಾರು 13,500 ಕೋಟಿ ರೂ. ವಂಚನೆ ಮಾಡಿರುವ ಪ್ರಕರಣದಲ್ಲಿ ಸಿಲುಕಿದ್ದ ಆರೋಪಿ ನೀರವ್ ಮೋದಿ 2018ರಲ್ಲಿ ವಿದೇಶಕ್ಕೆ ಪಲಾಯನ ಮಾಡಿದ್ದರು. ಸಿಬಿಐ ಹಾಗೂ ಇಡಿ ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಭಾರತಕ್ಕೆ ನೀರವ್ ಮೋದಿಯನ್ನು ಹಸ್ತಾಂತರಿಸುವಂತೆ ಕೇಂದ್ರ ಸರ್ಕಾರ ಬ್ರಿಟನ್ ಸರ್ಕಾರಕ್ಕೆ ಮನವಿ ಮಾಡಿತ್ತು. ನೀರವ್ ಮೋದಿಯನ್ನು ದೇಶಭೃಷ್ಟ ಆರ್ಥಿಕ ಅಪರಾಧಿ ಎಂದು ಭಾರತವು ಘೋಷಿಸಿತ್ತು. ಭಾರತದ ಮನವಿ ಮೇರೆಗೆ 2019ರಲ್ಲಿ ನೀರವ್ ಮೋದಿಯನ್ನು ಬ್ರಿಟನ್ ನಲ್ಲಿ ಬಂಧಿಸಲಾಗಿತ್ತು. ಇದಾದ ಬಳಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರ ಮಾಡಬೇಕು ಎಂದು ಕೋರ್ಟ್ ಆದೇಶ ಕೂಡಾ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ನೀರವ್ ಮೋದಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

Nirav Modi: Nirav Modi to be extradited to India, after he loses appeal in UK court

Comments are closed.