ನವದೆಹಲಿ : ಪಾಕಿಸ್ತಾನದ ಪೇಶಾವರದ (Pakistan Bomb blast) ಮಸೀದಿಯಲ್ಲಿ ಬಾಂಬ್ ಸ್ಪೋಟವಾಗಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂ ಡಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
ವಾಯುವ್ಯ ಪಾಕಿಸ್ತಾನಿ (Pakistan ) ಪೇಶಾವರ (Peshawar ) ನಗರದಲ್ಲಿ ಶುಕ್ರವಾರ ನಮಾಜ್ ಮಾಡುವ ವೇಳೆಯಲ್ಲಿ ಮಸೀದಿಯಲ್ಲಿ ಕಿಕ್ಕಿರಿದು ಜನರು ನೆರೆದಿದ್ದರು. ಈ ವೇಳೆಯಲ್ಲಿ ಶಿಯಾ ಮಸೀದಿಯ ಮೇಲೆ ಬಾಂಬ್ ನಡೆದಿದೆ. ಘಟನೆಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಭಕ್ತರು ಶುಕ್ರವಾರ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಆದರೆ ಬಾಂಬ್ ಸ್ಪೋಟದ ಹೊಣೆಯನ್ನು ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ. ಲೇಡಿ ರೀಡಿಂಗ್‌ನ ಮಾಧ್ಯಮ ವ್ಯವಸ್ಥಾಪಕ ಅಸಿಮ್ ಖಾನ್, ಡಾನ್ ಪ್ರಕಾರ ಇದುವರೆಗೆ 30 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ. ಗಾಯಗೊಂಡಿರುವ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಇಬ್ಬರು ದಾಳಿಕೋರರು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಈ ವೇಳೆಯಲ್ಲಿ ತಡೆಯಲು ಬಂದ ಕಾವಲು ನಿಂತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ರಾಜಧಾನಿ ನಗರ ಪೊಲೀಸ್ ಅಧಿಕಾರಿ ಪೇಶಾವರ್ ಇಜಾಜ್ ಅಹ್ಸಾನ್ ಹೇಳಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗುಂಡಿನ ದಾಳಿಯ ನಂತರ ಸ್ಫೋಟ ಸಂಭವಿಸಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ : ವ್ಯಾಕ್ಯೂಮ್ ಬಾಂಬ್ ಎಂದರೇನು? ರಷ್ಯಾ ಉಕ್ರೇನ್ ಮೇಲೆ ಈ ಬಾಂಬ್ ಪ್ರಯೋಗಿಸಿದೆಯೇ?
ಇದನ್ನೂ ಓದಿ : ಕಲ್ಲು ಗಣಿಕಾರಿಗೆ ವೇಳೆ ಬಂಡೆ ಕುಸಿತ : ಇಬ್ಬರು ಸಾವು, 6 ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ
(Pakistan Bomb blast Peshawar mosque kills at least 30, several others injured)