ನವದೆಹಲಿ : ಯಾತ್ರಾತ್ರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಯಾತ್ರಾತ್ರಿಗಳು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ವಾಯುವ್ಯ ಪ್ರದೇಶದಲ್ಲಿ ನಡೆದಿದೆ.
ಸೂಫಿ ಸಂತ ಕ್ಷೇತ್ರದ ದರ್ಶನ ಮುಗಿಸಿಕೊಂಡು ಬಲೂಚಿಸ್ತಾನದ ಖಜ್ಗರ್ ಬಳಿ ಬರುತ್ತಿದ್ದಂತೆಯೇ ಬಸ್ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದ ಈ ಪೈಕಿ 20 ಮಂದಿ ಯಾತ್ರಾತ್ರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬಸ್ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬದುಕುಳಿದವರನ್ನು ರಕ್ಷಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಇದಕ್ಕೂ ಮೊದಲು ರೈಲುಗಳ ಮುಖಾಮುಖಿ ಢಿಕ್ಕಿಯಿಂದಾಗಿ 60ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಇದೀಗ ಶುಭ ಶುಕ್ರವಾರದ ದಿನದಂದೇ ದುರ್ಘಟನೆ ಸಂಭವಿಸಿದೆ.