Shehbaz Sharif :ಪಾಕಿಸ್ತಾನದ ರಾಜಕೀಯ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಪಾಕ್ನ ನೂತನ ಪ್ರಧಾನಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಸಹೋದರ ಹಾಗೂ ಪಿಎಂಎಲ್ – ಎನ್ ನಾಯಕ ಶಹಬಾಜ್ ಷರೀಫ್ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅವಿಶ್ವಾಸ ಗೊತ್ತುವಳಿಯಲ್ಲಿ ಇಮ್ರಾನ್ ಖಾನ್ ಪಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಶಹಬಾಜ್ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದಾರೆ.
ಪಾಕ್ನಲ್ಲಿ ಪ್ರಧಾನಿ ಆಯ್ಕೆ ನಡೆಯುವ ಮುನ್ನ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಮಾತ್ರವಲ್ಲದೇ ಕಳ್ಳರ ಜೊತೆ ತಾನು ಅಸೆಂಬ್ಲಿಯಲ್ಲಿ ಕುಳಿತುಕೊಳ್ಳಲಾರೆ ಎಂದು ಹೇಳಿದ್ದರು. ಇಮ್ರಾನ್ ಖಾನ್ ಪಕ್ಷವಾರದ ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ ಮತದಾನವನ್ನು ಬಹಿಷ್ಕರಿಸಿತು.
ಪಾಕ್ ಅಧಿವೇಶನಕ್ಕೆ ಕೆಲವೇ ನಿಮಿಷಗಳ ಮೊದಲು ಮಾಜಿ ಸಚಿವ ಫವಾದ್ ಚೌಧರಿ ಎಲ್ಲಾ ಪಿಟಿಐ ಶಾಸಕರು ಸದನಕ್ಕೆ ರಾಜೀನಾಮೆ ನೀಡುತ್ತಾರೆ ಹಾಗೂ ಸರ್ಕಾರದ ಯಾವುದೇ ಭಾಗವಾಗಿ ಇರುವುದಿಲ್ಲ ಎಂದು ಹೇಳಿದರು. ಪಾಕಿಸ್ತಾನ ಸರ್ಕಾರವನ್ನು ಉರುಳಿಸುವಲ್ಲಿ ಅಮೆರಿಕದ ಜೊತೆಯಲ್ಲಿ ವಿಪಕ್ಷಗಳು ಕೈ ಜೋಡಿಸಿವೆ ಎಂದು ಇಮ್ರಾನ್ ಖಾನ್ ಆರೋಪಿಸುತ್ತಲೇ ಬಂದಿದ್ದಾರೆ.
ಪ್ರಧಾನಿ ಚುನಾವಣೆಗೆ ಮುನ್ನ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚೌಧರಿ ಹೇಳಿದ್ದಾರೆ.
“ಒಂದು 16 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಕೇಸ್ ಮತ್ತು 8 ಸಾವಿರ ಕೋಟಿ ರೂಪಾಯಿಯ ಇನ್ನೊಂದು ಭ್ರಷ್ಟಾಚಾರದ ಕೇಸ್ ಹೊಂದಿರುವ ವ್ಯಕ್ತಿ… ಆ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿ ಆಯ್ಕೆ ಮಾಡಿರುವುದು ದೇಶಕ್ಕೆ ಅದಕ್ಕಿಂತ ದೊಡ್ಡ ಅವಮಾನ ಇರಲಾರದು. ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಇಮ್ರಾನ್ ಖಾನ್ ಅವರು ಪಿಟಿಐ ಅಧಿಕೃತ ಟ್ವಿಟರ್ ಖಾತೆಯಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನು ಓದಿ : congress leader mallikarjuna kharge : ಇಡಿ ವಿಚಾರಣೆಗೆ ಹಾಜರಾದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ
ಇದನ್ನೂ ಓದಿ : gang rape on girl child : 16 ವರ್ಷದ ಬಾಲಕಿ ಮೇಲೆ 8 ಮಂದಿಯಿಂದ ಗ್ಯಾಂಗ್ ರೇಪ್: ಆರೋಪಿಗಳ ಬಂಧನ
Shehbaz Sharif, Pakistan Opposition Leader, Elected New PM