Boris Johnson resigns : ಬ್ರಿಟನ್​ ಪ್ರಧಾನಿ ಸ್ಥಾನಕ್ಕೆ ಬೋರಿಸ್​ ಜಾನ್ಸನ್​​ ರಾಜೀನಾಮೆ

Boris Johnson resigns : ಕನ್ಸರ್ವೇಟಿವ್​ ಪಕ್ಷದಲ್ಲಿ ತೀವ್ರ ವಿರೋಧವನ್ನು ಎದುರಿಸುತ್ತಿದ್ದ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​​ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಿಸಿದ್ದಾರೆ. ದೇಶಕ್ಕೆ ಹೊಸ ಪ್ರಧಾನಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ಈಗಿನಿಂದಲೇ ಆರಂಭವಾಗಬೇಕು ಎಂದು ಬೋರಿಸ್​ ಜಾನ್ಸನ್​ ದೇಶವನ್ನುದ್ದೇಶಿಸಿ ಹೇಳಿದ್ದಾರೆ. ಸಂಸದೀಯ ಕನ್ಸರ್ವೇಟಿವ್​ ಪಕ್ಷದ ಇಚ್ಛೆಯ ಅನುಸಾರ ದೇಶಕ್ಕೆ ಹೊಸ ನಾಯಕನ ಆಯ್ಕೆಯಾಗಬೇಕಿದೆ ಎಂದೂ ಇದೇ ವೇಳೆ ಅವರು ಹೇಳಿದರು.

ಹೊಸ ನಾಯಕನನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಈಗಲೇ ಆರಂಭಗೊಳ್ಳಬೇಕು ಎಂದು ರಾಜೀನಾಮೆ ನೀಡಿದ ಬಳಿಕ ಬೋರಿಸ್ ಜಾನ್ಸನ್​ ಹೇಳಿದ್ದಾರೆ. ಸರಿ ಸುಮಾರು ಮೂರು ವರ್ಷಗಳ ಹಿಂದೆ ಬ್ರಿಟನ್​​ನ ಪ್ರಧಾನಿಯಾಗಿ ಆಯ್ಕೆಯಾದ ಬೋರಿಸ್​ ಜಾನ್ಸನ್​ ಇತ್ತೀಚಿನ ದಿನಗಳಲ್ಲಿ ಹಗರಣಗಳ ಸುರಿಮಳೆಯಲ್ಲಿಯೇ ಮುಳುಗಿದ್ದಾರೆ. ಇದರಿಂದಾಗಿ ಬೋರಿಸ್​ ಜಾನ್ಸನ್​​ರ ಕಟ್ಟಾ ಬೆಂಬಲಿಗರೂ ಕೂಡ ಬೋರಿಸ್​ ಜಾನ್ಸನ್​ ಎಂದರೆ ಮೂಗು ಮುರಿಯುತ್ತಿದ್ದಾರೆ.

ಸಂಪುಟದ ಐವರು ಕ್ಯಾಬಿನೆಟ್​ ಮಂತ್ರಿಗಳು ಸೇರಿದಂತೆ ಸರ್ಕಾರದ ಸುಮಾರು 60 ಮಂದಿ ಸದಸ್ಯರು ಮಂಗಳವಾರದಿಂದ ರಾಜೀನಾಮೆ ನೀಡುತ್ತಿದ್ದಾರೆ. ಅಲ್ಲದೇ ಬೋರಿಸ್​ ಜಾನ್ಸನ್​ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಕೂಗು ಅನೇಕ ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಬೋರಿಸ್​ ಜಾನ್ಸನ್​ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದ ಇರಾಕ್​ ಮೂಲದ ನಾಧಿಮ್​ ಜಹಾವಿ ಬೋರಿಸ್​ ರಾಜೀನಾಮೆಗೆ ಬಹಿರಂಗವಾಗಿ ಆಗ್ರಹಿಸಿದ್ದರು. ಮುಂದಿನ ಅಕ್ಟೋಬರ್​ಗೆ ನಿಗದಿಯಾಗಿರುವ ಕನ್ಸರ್ವೇಟಿವ್ ಪಕ್ಷದ ಸಮಾವೇಶದ ವೇಳೆಗೆ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬ್ರಿಟನ್​​ನಲ್ಲಿ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬೋರಿಸ್​ ಜಾನ್ಸನ್​​ ಪ್ರಧಾನಿಯಾಗಿ ಔಪಚಾರಿಕವಾಗಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ.

ಇದನ್ನು ಓದಿ : section 144 imposed : ಕೆರೂರಿನಲ್ಲಿ ಅನ್ಯಕೋಮಿನ ಸಂಘರ್ಷದ ವೇಳೆ ಚಾಕು ಇರಿತ : ನಿಷೇಧಾಜ್ಞೆ ಜಾರಿ

ಇದನ್ನೂ ಓದಿ : MS Dhoni 41st birthday : ಎಂಎಸ್ ಧೋನಿಗೆ 41ನೇ ಹುಟ್ಟುಹಬ್ಬ: ವಿಶೇಷ ಗಿಫ್ಟ್‌ ಕೊಟ್ಟ ಪತ್ನಿ ಸಾಕ್ಷಿ, ರಿಷಬ್ ಪಂತ್

ಇದನ್ನೂ ಓದಿ : birth to three children : ಉಡುಪಿಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

UK Prime Minister Boris Johnson resigns after mutiny in his party

Comments are closed.