ಕಾಬೂಲ್ : ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಮೇಲೆ ಅಲ್ಲಿನ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಅಫ್ಘಾನಿಸ್ತಾನದ ಈಶಾನ್ಯ ಕುಂಡುಜ್ ಪ್ರಾಂತ್ಯದ ಮಸೀದಿಯಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ 100 ಜನ ಮೃತಪಟ್ಟಿದ್ದಾರೆ ತಾಲಿಬಾನ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. 100 ಜನರು ದಾಳಿಯ ಹಿಡಿತಕ್ಕೆ ಸಿಲುಕಿದ್ದಾರೆ ಎಂದು ತಾಲಿಬಾನ್ ಅಧಿಕಾರಿ ದೋಸ್ತ್ ಮೊಹಮ್ಮದ್ ಒಬೈದಾ ಹೇಳಿದ್ದಾರೆ. ಇವರಲ್ಲಿ ಗಾಯಾಳುಗಳಲ್ಲಿ ಹೆಚ್ಚಿನವರು ಮೃತಪಟ್ಟಿದ್ದಾರೆ. ಆದ್ರೆ, ಈವರೆಗೂ ಈ ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ ಎಂದು ರಾಷ್ಟ್ರೀಯ ಸುದ್ದಿವಾಹಿನಿಗಳು ವರದಿ ಮಾಡಿವೆ.
ಐಎಸ್ ಅಫ್ಘಾನಿಸ್ತಾನದಲ್ಲಿ ಶಿಯಾ ಮುಸ್ಲಿಮರನ್ನು ದೀರ್ಘಕಾಲ ಗುರಿಯಾಗಿಸಿಕೊಂಡಿದೆ. ಈ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಅಮೆರಿಕನ್ ಸೈನ್ಯವನ್ನು ಹಿಂತೆಗೆದುಕೊಂಡ ನಂತರ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆಗಿಂತ ಹೆಚ್ಚು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Japan Earthquakes : ಜಪಾನ್‌ನಲ್ಲಿ ಪ್ರಬಲ ಭೂಕಂಪನ : 5.9 ತೀವ್ರತೆ ದಾಖಲು
(Bombings in mosque in Afghanistan: Death toll rises to 100)