ಇಸ್ಲಾಮಾಬಾದ್ : ದಕ್ಷಿಣ ಪಾಕಿಸ್ತಾನದಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ20 ಮಂದಿ ಸಾವನ್ನಪ್ಪಿದ್ದಾರೆ. ಉಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ ಎಂದು ಪ್ರಾಂತೀಯ ಆಂತರಿಕ ಸಚಿವ ಮೀರ್ ಜಿಯಾ ಉಲ್ಲಾ ಲೌಂಗ್ ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದಿಂದ ಸುಮಾರು 14 ಕಿ.ಮೀ. ದೂರದಲ್ಲಿರುವ ಹರ್ನೈನ ಎನ್‌ಎನ್‌ಇಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಪಾಕಿಸ್ತಾನದ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿಯನ್ನು ನೀಡಿದೆ. ಭೂಕಂಪದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 20 ಮಂದಿ ಗೋಡೆ ಕುಸಿತದಿಂದ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
ಇನ್ನಷ್ಟು ಮಂದಿ ಗೋಡೆಗಳ ನಡುವಲ್ಲೇ ಸಿಲುಕಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ಭೂಕಂಪ ಸಂಭವಿಸಿದ ಸ್ಥಳದಲ್ಲಿ ಯಾವುದೇ ಮೂಲಸೌಕರ್ಯ ಗಳು ಇಲ್ಲದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಕ್ಕೆ ಹಿನ್ನಡೆಯಾಗಿದೆ. ಸ್ಥಳಕ್ಕೆ ರಕ್ಷಣಾ ತಂಡ ಹಾಗೂ ಪೊಲೀಸರು ಭೇಟಿಯನ್ನು ನೀಡಿದ್ದಾರೆ.
ಇದನ್ನೂ ಓದಿ : ಜಪಾನ್‌ನಲ್ಲಿ ಪ್ರಬಲ ಭೂಕಂಪನ : 5.9 ತೀವ್ರತೆ ದಾಖಲು
ಇದನ್ನೂ ಓದಿ : ಮಳೆಗೆ ಮನೆ ಕುಸಿತ : 7 ಮಂದಿ ದುರ್ಮರಣ
( Powerful earthquake in Pakistan kills more than 20 )