NIC ನೇಮಕಾತಿ 2026 : 376 ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ನ್ಯಾಷನಲ್ ಇನ್ಫಾರ್ಮೆಟಿಕ್ಸ್ 376 ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಫಾರ್ಮೆಟಿಕ್ಸ್ 376 ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಯುವಕ/ಯುವತಿಯರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸೆಪ್ಟೆಂಬರ್ 30 ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಹೀಗಿವೆ:
ಶೈಕ್ಷಣಿಕ ಅರ್ಹತೆ
ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಎಸ್ಸಿ, ಎಂಎಸ್ಸಿ, ಎಂಸಿಎ, ಬಿಇ, ಅಥವಾ ಬಿಟೆಕ್ ಪದವಿ ಹೊಂದಿರಬೇಕು. ಜೊತೆಗೆ ಕಡ್ಡಾಯವಾಗಿ ಗೇಟ್ ಪರೀಕ್ಷೆಯ ಅಂಕಪಟ್ಟಿಯನ್ನು ಹೊಂದಿರಬೇಕು.
ವಯೋಮಿತಿ
ಸೆಪ್ಟೆಂಬರ್ 30, 2026 ಕ್ಕೆ ಅಭ್ಯರ್ಥಿಗಳ ವಯಸ್ಸು 30 ವರ್ಷದ ಒಳಗೆ ಇರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಪಾವತಿಸಬೇಕಾಗಿದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹800 ಆದರೆ ಎಸ್‌ಸಿ/ಎಸ್‌ಟಿ, ಅಂಗವಿಕಲರು ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು ಎನ್‌ಐಸಿಯ ಅಧಿಕೃತ ವೆಬ್‌ಸೈಟ್ recruitment.nic.in ಗೆ ಭೇಟಿ ನೀಡಬೇಕು.
ವೆಬ್‌ಸೈಟ್‌ನ ಮುಖಪುಟಕ್ಕೆ ಹೋಗಿ ನೋಂದಣಿ ವಿಭಾಗದ ಮೇಲೆ ಕ್ಲಿಕ್ ಮಾಡಿ.
ನಂತರ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ಲಾಗಿನ್ ಆಗಿ.
ಈಗ ಅಗತ್ಯವಿರುವ ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ನಮೂದಿಸಿ.
ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ, ಅರ್ಜಿ ಶುಲ್ಕವನ್ನು ಪಾವತಿಸಿ.
ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ, ಭವಿಷ್ಯದ ಉಲ್ಲೇಖಕ್ಕಾಗಿ ಅದರ ಪ್ರಿಂಟ್‌ಔಟ್‌್ ತೆಗೆದುಕೊಳ್ಳಿ.
Topics
ಸಂಬಂಧಿತ ಸುದ್ದಿಗಳು
job
BOI SO ನೇಮಕಾತಿ 2026 : ಈ ದಿನದಿಂದ 200 ಕ್ಕೂ ಹೆಚ್ಚು ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!
job
KPSC 319 KAS ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೇ ದಿನ ! ಗ್ಯಾಜೆಟೆಡ್ ಆಫೀಸರ್ ಆಗುವ ಅವಕಾಶ ತಪ್ಪಿಸಿಕೊಳ್ಳಬೇಡಿ !
job
ಇಂಜಿನಿಯರಿಂಗ್ ಪದವೀಧರರಿಗೆ ಶುಭ ಸುದ್ದಿ: ಇಸ್ರೋದಲ್ಲಿ 176 ಸೈಂಟಿಸ್ಟ್/ಇಂಜಿನಿಯರ್ ಹುದ್ದೆಗಳ ಭರ್ತಿ
job

