ಕೆನರಾ ಬ್ಯಾಂಕ್ ಅಪ್ರೆಂಟಿಸ್‌ಶಿಪ್ ನೇಮಕಾತಿ ಅರ್ಜಿ ಸಲ್ಲಿಕೆ ಪ್ರಾರಂಭ ! ಮಾಸಿಕ ಸ್ಟೈಫಂಡ್ 15000 ಕ್ಕೂ ಅಧಿಕ !
ಕೆನರಾ ಬ್ಯಾಂಕ್ ಅಪ್ರೆಂಟಿಸ್‌ಶಿಪ್ ನೇಮಕಾತಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 17 ರೊಳಗೆ ಅರ್ಜಿ ಸಲ್ಲಿಸಿ.
By Archana V Bhat | ಅರ್ಚನಾ ವಿ ಭಟ್
1 min read
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಆಕಾಂಕ್ಷಿಗಳಿಗೆ ಸುವರ್ಣಾವಕಾಶ. ಕೆನರಾ ಬ್ಯಾಂಕ್ ಅಪ್ರೆಂಟಿಸ್‌ಶಿಪ್ ಹುದ್ದೆ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅಪ್ರೆಂಟಿಸ್ ಆಗಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಕೆನಾರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್‌ಶಿಪ್ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 1 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 17, 2026 ರವರೆಗೆ ಅರ್ಜಿ ಸಲ್ಲಿಸುವ ಅವಕಾಶ ಹೊಂದಿರುತ್ತಾರೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಎಂದು ನೋಡೋಣ.
ವಯೋಮಿತಿ
ಅಪ್ರೆಂಟಿಸ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 28 ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ವಿಶೇಷ ಸಡಿಲಿಕೆಯಿರುತ್ತದೆ.
ಶೈಕ್ಷಣಿಕ ಅರ್ಹತೆ
ಕೆನರಾ ಬ್ಯಾಂಕ್ ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹೊಂದಿರಬೇಕು.
ಸ್ಟೈಫಂಡ್ ಎಷ್ಟು ?
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,650 ರೂ. ಸ್ಟೈಫಂಡ್ ನೀಡಲಾಗುವುದು.
ಅರ್ಜಿ ಶುಲ್ಕ
ಕೆನರಾ ಬ್ಯಾಂಕ್ ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು. ಆದರೆ ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ
ಅಪ್ರೆಂಟಿಸ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲಿಗೆ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ canarabank.bank.in ಗೆ ಭೇಟಿ ನೀಡಿ.
ವೆಬ್‌ಸೈಟ್‌ನ ಮುಖಪುಟದಲ್ಲಿರುವ ಕರಿಯರ್ ಸೆಕ್ಷನ್‌ಗೆ ಹೋಗಿ.
ಬಳಿಕ ಅಲ್ಲಿ ಕೇಳಿರುವ ಮಾಹಿತಿಗಳನ್ನು ಎಚ್ಚರದಿಂದ ಭರ್ತಿ ಮಾಡಿ.
ನಂತರ ಅರ್ಜಿ ಶುಲ್ಕ ಪಾವತಿಸಿ.
ಮತ್ತೊಮ್ಮೆ ಅರ್ಜಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಅರ್ಜಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅದರ ಪ್ರೀಂಟ್ ಔಟ್ ತೆಗೆದುಕೊಳ್ಳಿ.
Topics
ಸಂಬಂಧಿತ ಸುದ್ದಿಗಳು
job
SSLC, PUC ಪಾಸಾದ ಅಭ್ಯರ್ಥಿಗಳಿಗೆ ಗುಡ್ನ್ಯೂಸ್ ! ರೈಲ್ವೆಯಲ್ಲಿ 1,688 ಹುದ್ದೆಗಳಿಗೆ ನೇಮಕಾತಿ ಪ್ರಕಟ !
job
10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ ! ಇಂಡಿಯನ್ ಕೋಸ್ಟ್ ಗಾರ್ಡ್ನಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ !
job
ಯುಪಿಎಸ್ಸಿ ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2027 ಅಧಿಸೂಚನೆ ಪ್ರಕಟ ! 480 ಖಾಲಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ !
job

