CSIR ನಲ್ಲಿ ಟೆಕ್ನಿಷಿಯನ್ ಗ್ರೂಪ್ I ಹುದ್ದೆಗೆ ಅರ್ಜಿ ಆಹ್ವಾನ ! ITI ಆದವರು ಇಂದೇ ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದೆ. CSIR ಟೆಕ್ನಿಷಿಯನ್ ಗ್ರೂಪ್ I ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕೌನ್ಸಿಲ್ ಆಫ್ ಸೈಟಿಫಿಕ್ ಆಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಸ್ಥಾಪನೆಯಾಗಿದೆ. ಇದು ದೇಶದ ಪ್ರಮುಖ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆಯಾಗಿದೆ. ಇದು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ಪೋಷಿಸುವ ಕೆಲಸ ಮಾಡುತ್ತದೆ. ಇದೀಗ CSIR ಟೆಕ್ನಿಷಿಯನ್ ಗ್ರೂಪ್ I ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಮೂಲಕ ಸಿಎಸ್‌ಐಆರ್ ಒಟ್ಟು 43 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ಸೆಪ್ಟೆಂಬರ್ 17, 2026 ಸಂಜೆ 5:00 ಗಂಟೆಯೊಳಗೆ ತಮ್ಮ ಅರ್ಜಿ ಸಲ್ಲಿಸುವ ಅವಕಾಶವನ್ನು ಹೊಂದಿರುತ್ತಾರೆ. ಯಾವ ಅರ್ಹತೆಗಳಿರುವವರು ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಓದಿ.
ಟೆಕ್ನಿಷಿಯನ್ ಗ್ರೂಪ್ I ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಶೈಕ್ಷಣಿಕ ಅರ್ಹತೆ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿಯ ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪಾಸಾಗಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷಗಳಿಗಿಂತ ಹೆಚ್ಚಿರಬಾರದು. ಆದರೆ ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಾಮಾನುಸಾರ ವಯೋಮಿತಿ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಎಸ್‌ಸಿ, ಎಸ್‌ಟಿ, ಪಿಹೆಚ್, ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ, ಒಬಿಸಿ ಅಥವಾ ಇಡಬ್ಲ್ಯೂಎಸ್ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ವೇತನ
ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 19,900 ರೂ. ಯಿಂದ 63,200 ರೂ. ವರೆಗೆ ವೇತನ ಪಡೆಯುತ್ತಾರೆ.
ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಕೆ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ recruitment.csir.res.in ವೆಬ್‌ಸೈಟ್‌ಗೆ ಭೇಟಿ ನೀಡಿ. ಅಲ್ಲಿ ‘ಅಪ್ಲೈ ಆನ್‌ಲೈನ್’ ಮೇಲೆ ಕ್ಲಿಕ್ಕಿಸಿ. ಅಲ್ಲಿ ಕೇಳಿರುವ ವಿವರಗಳನ್ನು ಭರ್ತಿ ಮಾಡಿ. ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ನಂತರ ನಿಗದಿತ ಶುಲ್ಕವನ್ನು ಪಾವತಿಸಿ. ಅಂತಿಮವಾಗಿ ಅರ್ಜಿಯನ್ನು ಇನ್ನೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಿ. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯ ಪ್ರಿಂಟ್ ತೆಗೆದುಕೊಳ್ಳಿ.
Topics
ಸಂಬಂಧಿತ ಸುದ್ದಿಗಳು
job
ಎಸ್ಬಿಐ ನಲ್ಲಿ 9124 ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : ವೇತನ 60,000 ಕ್ಕೂ ಅಧಿಕ
job
ಇಂಡಿಯನ್ ಆಯಿಲ್ನಲ್ಲಿ ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ: ₹1.60 ಲಕ್ಷದವರೆಗೆ ವೇತನ, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 3 ಕೊನೆ ದಿನ!
job
ಎನ್ಎಚ್ಎಐಯಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ವೇತನ 60,000
job

