News Next Kannada

job

IBPS ಕ್ಲರ್ಕ್‌ ನೇಮಕಾತಿ ಅರ್ಜಿ ಸಲ್ಲಿಕೆಗೆ ಗಡುವು ವಿಸ್ತರಣೆ: ಪದವೀಧರರು ಈ ಅವಕಾಶ ತಪ್ಪಿಸಿಕೊಳ್ಳಬೇಡಿ!

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 11,403 ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

By Archana V Bhat
IBPS ಕ್ಲರ್ಕ್‌ ನೇಮಕಾತಿ ಅರ್ಜಿ ಸಲ್ಲಿಕೆಗೆ ಗಡುವು ವಿಸ್ತರಣೆ: ಪದವೀಧರರು ಈ ಅವಕಾಶ ತಪ್ಪಿಸಿಕೊಳ್ಳಬೇಡಿ!

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 11,403 ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಕ್ಲರ್ಕ್‌ ಹುದ್ದೆಗಳಿಗೆ ಅನಿವಾರ್ಯ ಕಾರಣಗಳಿಂದ ಅರ್ಜಿ ಸಲ್ಲಿಸಲು ಆಗದೇ ಇರುವವರಿಗೆ ಇದು ಸುವರ್ಣಾವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್‌ 28 ವರೆಗೆ ಅರ್ಜಿ ಸಲ್ಲಿಸಬಹುದು. ಈ ಕೆಳಗಿನ ಅರ್ಹತೆಗಳಿರುವ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಲು ಐಬಿಪಿಎಸ್‌ ಸೂಚಿಸಿದೆ.

ಹುದ್ದೆಗಳ ವಿವರ

ಐಬಿಪಿಎಸ್‌ ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 11,403 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರಲ್ಲಿ ಸಾಮಾನ್ಯ ವರ್ಗಕ್ಕೆ 4,740, ಒಬಿಸಿಗಳಿಗೆ 2,815, ಇಡಬ್ಲ್ಯೂಎಸ್‌ಗೆ 996, ಎಸ್‌ಸಿಗಳಿಗೆ 1,910 ಮತ್ತು ಎಸ್‌ಟಿಗಳಿಗೆ 942 ಹುದ್ದೆಗಳು ಸೇರಿವೆ.

ಶೈಕ್ಷಣಿಕ ಅರ್ಹತೆ

ಕ್ಲರ್ಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ

ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 28 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದೆ. SC, ST ಮತ್ತು PwD ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕ ₹175 ಮತ್ತು ಉಳಿದ ವರ್ಗಗಳಿಗೆ ನೋಂದಣಿ ಶುಲ್ಕ ₹850.

ಅರ್ಜಿ ಸಲ್ಲಿಕೆ ಹೇಗೆ?

ಐಬಿಪಿಎಸ್‌ ಕ್ಲರ್ಕ್‌ ಹುದ್ದೆಗೆ ಅರ್ಜಿಯನ್ನು ಆನ್‌ಲೈನ್‌ ನಲ್ಲಿ ಸಲ್ಲಿಸಬಹುದಾಗಿದೆ.