ICF ಅಪ್ರೆಂಟಿಸ್‌ಶಿಪ್‌ ನೇಮಕಾತಿ : 1010 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ..!

ರೈಲ್ವೆಯಲ್ಲಿ ಅಪ್ರೆಂಟಿಸ್‌ಶಿಪ್‌ ತರಬೇತಿ ಪಡೆಯುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು.

By Archana V Bhat

1 min read

WhatsAppPost
Indian Railway Recruitment
Indian Railway Recruitment

ಈಸ್ಟ್‌ ಕೋಸ್ಟ್ ರೈಲ್ವೆಯು (ಪೂರ್ವ ಕರಾವಳಿ ರೈಲ್ವೆ) ಅಪ್ರೆಂಟಿಸ್‌ಶಿಪ್‌ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ರೈಲ್ವೆಯಲ್ಲಿ ಅಪ್ರೆಂಟಿಸ್‌ಶಿಪ್‌ ತರಬೇತಿ ಪಡೆಯುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಐಸಿಎಫ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು ಅಭ್ಯರ್ಥಿಗಳು ಸೆಪ್ಟೆಂಬರ್‌ 7 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಹೀಗಿವೆ:

ವಯೋಮಿತಿ

ಕನಿಷ್ಠ 15 ವರ್ಷಗಳು ಹಾಗೂ ಗರಿಷ್ಠ 24 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಶೈಕ್ಷಣಿಕ ಅರ್ಹತೆ

ಸಂಬಂಧಿತ ವಿಷಯದಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ

ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 100 ರೂ. ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ ಮಹಿಳಾ ಅಭ್ಯರ್ಥಿಗಳಿಗೆ ಉಚಿತ.

ಆಯ್ಕೆ ಹೇಗೆ?

ಎಸ್‌ಎಸ್‌ಎಲ್‌ಸಿ ಅಥವಾ 10 ತರಗತಿ ಮತ್ತು ಐಟಿಐ ಅಂಕಗಳಿಂದ ಮೆರಿಟ್‌ ಪಟ್ಟಿ ತಯಾರಿಸಿ, ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆರಿಸಲಾಗುತ್ತದೆ.

ಸ್ಟೈಫಂಡ್‌ ಎಷ್ಟು?

ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8,200 ರೂ.ಗಳಿಂದ 9,600 ರೂ. ಗಳವರೆಗೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಐಸಿಎಫ್‌ ಅಪ್ರೆಂಟಿಸ್‌ಶಿಪ್‌ ನೇಮಕಾತಿಗೆ ಅರ್ಜಿ ಸಲ್ಲಿಸಲು ಮೊದಲು ಅಧಿಕೃತ ವೆಬ್‌ಸೈಟ್ pb.icf.gov.in ಗೆ ಭೇಟಿ ನೀಡಿ.

ಬಳಿಕ ವೆಬ್‌ಸೈಟ್‌ನ ಮುಖಪುಟದಲ್ಲಿರುವ ಆನ್‌ಲೈನ್ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ.

ನಂತರ, ಅಗತ್ಯವಿರುವ ವಿವರಗಳನ್ನು ಎಚ್ಚರಿಕೆಯಿಂದ ನಮೂದಿಸಿ.

ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ, ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ಕೊನೆಗೆ, ಅದರ ಪ್ರಿಂಟ್‌ಔಟ್‌ ಸಹ ತೆಗೆದುಕೊಳ್ಳಿ.

Topics

ಸಂಬಂಧಿತ ಸುದ್ದಿಗಳು